ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಚ್ಚಿ: ಕರಾವಳಿ ಕಾವಲುಪಡೆ ಹೆಲಿಕಾಪ್ಟರ್ ಪತನ

Last Updated 26 ಮಾರ್ಚ್ 2023, 11:31 IST
ಅಕ್ಷರ ಗಾತ್ರ

ತಿರುವನಂತಪುರ/ಕೊಚ್ಚಿ: ಕರಾವಳಿ ಕಾವಲು ಪಡೆಯ ಹೆಲಿಕಾಪ್ಟರ್‌ ಒಂದು ಕೊಚ್ಚಿಯ ನೆಡುಂಬಸ್ಸೇರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನಗೊಂಡಿದ್ದು, ಅದರಲ್ಲಿದ್ದ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಹೆಲಿಕಾಪ್ಟರ್‌ನ ತರಬೇತಿ ಹಾರಾಟದ ವೇಳೆ ಮಧ್ಯಾಹ್ನ 12.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಟೇಕ್ ಆಫ್ ಆದ ತಕ್ಷಣ ಪತನವಾಗಿದ್ದರಿಂದ ಅದರಲ್ಲಿದ್ದವರಿಗೆ ಹೆಚ್ಚಿನ ಅಪಾಯ ಉಂಟಾಗಲಿಲ್ಲ. ರನ್‌ವೇ ಬಳಿ ಈ ಘಟನೆ ನಡೆದ ಕಾರಣ ವಿಮಾನ ನಿಲ್ದಾಣವನ್ನು ಮಧ್ಯಾಹ್ನ 3 ಗಂಟೆಯವರೆಗೆ ಮುಚ್ಚಲಾಗಿತ್ತು. ಇಲ್ಲಿಗೆ ಬರಬೇಕಿದ್ದ ವಿಮಾನಗಳಿಗೆ ಮಾರ್ಗ ಬದಲಿಸಿ ಸಮೀಪದ ಇತರ ವಿಮಾನ ನಿಲ್ದಾಣಗಳಲ್ಲಿ ಇಳಿಯಲು ವ್ಯವಸ್ಥೆ ಮಾಡಲಾಯಿತು.

ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT