ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಲ್ವಾಮದಲ್ಲಿ ಸ್ಫೋಟಕ ಪತ್ತೆ: ತಪ್ಪಿದ ಭಾರಿ ಅನಾಹುತ

Last Updated 23 ಡಿಸೆಂಬರ್ 2021, 15:00 IST
ಅಕ್ಷರ ಗಾತ್ರ

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಬುಧವಾರ ಸುಧಾರಿತ ಸ್ಫೋಟಕ ಸಾಮಗ್ರಿ (ಐಇಡಿ) ಪತ್ತೆಯಾಗಿದ್ದು, ಭದ್ರತಾ ಪಡೆಗಳು ಸ್ಫೋಟಕವನ್ನು ನಾಶಪಡಿಸುವ ಮೂಲಕ ಭಾರಿ ಅನಾಹುತವನ್ನು ತಪ್ಪಿಸಿವೆ.

ಗುಪ್ತಚರ ದಳದ ಖಚಿತ ಮಾಹಿತಿ ಮೇರೆಗೆ ಇಲ್ಲಿನ ವಾನ್‌ಪೋರಾ ಪ್ರದೇಶದ ನೆವಾ–ಶ್ರೀನಗರ ರಸ್ತೆಯಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿತ್ತು. ಈ ವೇಳೆ ಈ ವೇಳೆ ರಸ್ತೆ ಬದಿಯಲ್ಲಿ ಸುಮಾರು 5 ಕೆ.ಜಿ ತೂಕದ ಸುಧಾರಿತ ಸ್ಫೋಟಕ ಪತ್ತೆಯಾಗಿದ್ದು, ಕಂಟೈನರ್‌ಗೆ ಜೋಡಿಸಲಾಗಿತ್ತು. ದೊಡ್ಡ ಗಾತ್ರದ ಸ್ಫೋಟಕವನ್ನು ಭದ್ರತಾ ಪಡೆಗಳು ಪತ್ತೆ ಹಚ್ಚುವ ಮೂಲಕ ಭಾರಿ ಅನಾಹುತವನ್ನು ತಪ್ಪಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.

‘ಪತ್ತೆಯಾದ ಸ್ಫೋಟಕವನ್ನು ಪೊಲೀಸ್‌ ಹಾಗೂ ಸೇನೆಯ ಬಾಂಬ್‌ ನಿಷ್ಕ್ರಿಯ ತಂಡ ನಾಶಪಡಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಆರಂಭಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT