ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಮ್ಲಜನಕ ಪೂರೈಕೆಗೆ ಅಡ್ಡಿಮಾಡುವವರನ್ನು ಗಲ್ಲಿಗೇರಿಸುತ್ತೇವೆ: ದೆಹಲಿ ಹೈಕೋರ್ಟ್‌

Last Updated 24 ಏಪ್ರಿಲ್ 2021, 8:34 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಆಡಳಿತದ ಯಾವುದೇ ಅಧಿಕಾರಿ ಆಮ್ಲಜನಕ ಪೂರೈಕೆಗೆ ಅಡ್ಡಿ ಉಂಟುಮಾಡಿದರೆ, ಅಂತಹ ವ್ಯಕ್ತಿಯನ್ನು ಗಲ್ಲಿಗೇರಿಸುವುದಾಗಿ ದೆಹಲಿ ಹೈಕೋರ್ಟ್‌ ಎಚ್ಚರಿಸಿದೆ.

ಗಂಭೀರ ಸ್ಥಿತಿಯಲ್ಲಿರುವ ಕೋವಿಡ್‌ ರೋಗಿಗಳಿಗೆ ಆಮ್ಲಜನಕದ ಕೊರತೆ ಉಂಟಾಗಿರುವ ಬಗ್ಗೆ ಮಹಾರಾಜ ಅಗ್ರಸೇನ್‌ ಆಸ್ಪತ್ರೆಯು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಪಿನ್‌ ಸಂಘಿ ಮತ್ತು ರೇಖಾ ಪಲ್ಲಿ ಅವರ ಪೀಠವು, ‘ಆಮ್ಲಜನಕ ಪೂರೈಕೆಗೆ ಅಡ್ಡಿಯನ್ನುಂಟು ಮಾಡಿದ ವ್ಯಕ್ತಿಯ ಬಗ್ಗೆ ತಿಳಿಸಿ’ ಎಂದು ದೆಹಲಿ ಸರ್ಕಾರಕ್ಕೆ ಸೂಚಿಸಿತು.

‘ಆಮ್ಲಜನಕ ಪೂರೈಕೆಗೆ ಅಡ್ಡಿ ಉಂಟುಮಾಡುವ ಯಾರೊಬ್ಬರನ್ನೂ ಬಿಡುವುದಿಲ್ಲ’ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.

‘ಅಂತಹ ಸ್ಥಳೀಯ ಅಧಿಕಾರಿಗಳ ಬಗ್ಗೆ ಕೇಂದ್ರ ಸರ್ಕಾರಕ್ಕೂ ಮಾಹಿತಿ ನೀಡಿ. ಕೇಂದ್ರವೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತದೆ’ ಎಂದು ನ್ಯಾಯಾಲಯ ಹೇಳಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT