ಯಾವ ಸ್ಥಳದವರನ್ನು ಪಶ್ಚಿಮ ಬಂಗಾಳದಲ್ಲಿ ಒಳಗಿನವರು ಎನ್ನಲಾಗುತ್ತದೆ? ಕೇಂದ್ರ ಸಚಿವ

ಕೋಲ್ಕತ್ತ: ‘ಕೇಂದ್ರ ಸಚಿವರೇ ಪಶ್ಚಿಮ ಬಂಗಾಳದಲ್ಲಿ ಹೊರಗಿನವರಾದರೆ, ಯಾವ ಸ್ಥಳದವರನ್ನು ಒಳಗಿನವರು ಎಂದು ಪರಿಗಣಿಸಲಾಗುತ್ತದೆ’ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಪ್ರಶ್ನಿಸಿದ್ದಾರೆ.
‘ಪಶ್ಚಿಮ ಬಂಗಾಳವೂ ದೇಶದ ಪ್ರಮುಖ ಭಾಗವಾಗಿದೆ. ಕೇಂದ್ರ ಸಚಿವರು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡುವುದು ಅಪರಾಧವೇ‘ ಎಂದು ಪ್ರಶ್ನಿಸಿದ್ದಾರೆ.
ನೇತಾಜಿ ಸುಭಾಷ್ ಚಂದ್ರ ಭೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರುಸುದ್ದಿಗಾರರ ಜೊತೆಗೆ ಮಾತನಾಡಿದರು.
ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಕ್ಕೆ ಹೊರಗಿನವರನ್ನು ಕರೆತರುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಟೀಕಿಸಿದ್ದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.