ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉ. ಪ್ರದೇಶ ಕೇರಳದಂತಾದರೆ ಜಾತಿ, ಧರ್ಮದ ಕಾರಣಕ್ಕೆ ಕೊಲೆಗಳಾಗದು: ಪಿಣರಾಯಿ ವಿಜಯನ್‌

Last Updated 10 ಫೆಬ್ರುವರಿ 2022, 9:43 IST
ಅಕ್ಷರ ಗಾತ್ರ

ಬೆಂಗಳೂರು: 'ಉತ್ತರ ಪ್ರದೇಶವು ಕೇರಳವಾಗಿ ಬದಲಾದರೆ ಅಲ್ಲಿನ ಜನರು ಉತ್ತಮ ಶಿಕ್ಷಣ, ಆರೋಗ್ಯ ಸೇವೆ, ಸಾಮಾಜಿಕ ಸುಧಾರಣೆ, ಜೀವನ ಗುಣಮಟ್ಟ ಮತ್ತು ಸಾಮರಸ್ಯದ ಸಮಾಜವನ್ನು ಆನಂದಿಸುತ್ತಾರೆ. ಜಾತಿ, ಧರ್ಮದ ಹೆಸರಿನಲ್ಲಿ ಕೊಲೆಗಳು ಸಂಭವಿಸುವುದಿಲ್ಲ. ಉತ್ತರ ಪ್ರದೇಶದ ಜನತೆಗೆ ಬೇಕಿರುವುದೇ ಇದು' ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ತಿಳಿಸಿದ್ದಾರೆ.

'ಮತದಾರರು ತಪ್ಪು ಮಾಡಿದರೆ, ಉತ್ತರ ಪ್ರದೇಶವು ಮತ್ತೊಂದು ಕಾಶ್ಮೀರ, ಕೇರಳ ಅಥವಾ ಪಶ್ಚಿಮ ಬಂಗಾಳವಾಗಿ ಬದಲಾಗುತ್ತದೆ' ಎಂಬ ಸಿಎಂ ಯೋಗಿ ಆದಿತ್ಯನಾಥ ಅವರ ಹೇಳಿಕೆಗೆ ಸಂಬಂಧಿಸಿ ಪಿಣರಾಯಿ ವಿಜಯನ್‌ ಟ್ವೀಟ್‌ ಮೂಲಕ ತಿರುಗೇಟು ನೀಡಿದ್ದಾರೆ.

ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭಗೊಂಡ ಹಿನ್ನೆಲೆ ಮತದಾರರನ್ನು ಉದ್ದೇಶಿಸಿ ಮಾತನಾಡಿರುವ ವಿಡಿಯೊವನ್ನು ಯೋಗಿ ಆದಿತ್ಯನಾಥ ಅವರು ಹಂಚಿಕೊಂಡಿದ್ದರು. 'ಮತದಾರರು ಮೈಮರೆತರೆ 5 ವರ್ಷಗಳ ದುಡಿಮೆ ವ್ಯರ್ಥವಾಗುತ್ತದೆ. ಉತ್ತರ ಪ್ರದೇಶವು ಕಾಶ್ಮೀರ, ಕೇರಳ ಅಥವಾ ಬಂಗಾಳವಾಗಿ ಬದಲಾಗಲು ಹೆಚ್ಚು ಸಮಯ ಬೇಕಾಗುವುದಿಲ್ಲ' ಎಂದು ಎಚ್ಚರಿಕೆ ನೀಡಿರುವುದು ವಿಡಿಯೊದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT