ಭಾನುವಾರ, ಸೆಪ್ಟೆಂಬರ್ 19, 2021
24 °C

ಚೀನಾ ಕ್ರಮಗಳನ್ನು ಕಡೆಗಣಿಸಿದರೆ ಆಪತ್ತು: ರಾಹುಲ್ ಗಾಂಧಿ ಎಚ್ಚರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಚೀನಾದ ಕ್ರಮಗಳನ್ನು ಕಡೆಗಣಿಸಿದರೆ ಭವಿಷ್ಯದಲ್ಲಿ ಸಮಸ್ಯೆಯಾಗಲಿದೆ’ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಎಚ್ಚರಿಕೆ ನೀಡಿದ್ದಾರೆ.

‘ಚೀನಾವನ್ನು ಯಾವ ರೀತಿ ನಿಭಾಯಿಸಬೇಕು ಎನ್ನುವ ಬಗ್ಗೆ ಸರ್ಕಾರಕ್ಕೆ ಸ್ಪಷ್ಟ ನಿಲುವುಗಳು ಇಲ್ಲ. ಸರ್ಕಾರದ ದಿಟ್ಟತನ ನಿರ್ಧಾರಗಳನ್ನು ಕೈಗೊಳ್ಳಬೇಕು’ ಎಂದು ಟ್ವೀಟ್‌ ಮಾಡಿದ್ದಾರೆ.

ಪೂರ್ವ ಲಡಾಖ್‌ನ ಡೆಮ್‌ಚೊಕ್‌ನಲ್ಲಿ ಇನ್ನೂ ಚೀನಾದ ಟೆಂಟ್‌ಗಳಿವೆ ಎಂದು ಮಾಧ್ಯಮಗಳಲ್ಲಿ ಬಂದಿರುವ ವರದಿಯನ್ನು ರಾಹುಲ್‌ ಉಲ್ಲೇಖಿಸಿದ್ದಾರೆ.

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯ ವಕ್ತಾರ ರಣದೀಪ್‌ ಸುರ್ಜೇವಾಲ್‌ ಅವರು ಸಹ ಇದೇ ವಿಷಯದ ಬಗ್ಗೆ ಸರ್ಕಾರದ ಧೋರಣೆಯನ್ನು ಟೀಕಿಸಿದ್ದಾರೆ.

‘ನಮ್ಮ ಭೂಮಿಯಿಂದ ಚೀನಾ ತೆಗೆದು ಹಾಕಿ’ ಎನ್ನುವ ಹ್ಯಾಷಟ್ಯಾಗ್‌ ಬಳಸಿ, ಟ್ವೀಟ್‌ ಮಾಡಿರುವ ಅವರು, ‘ಸಾಹೇಬ್‌ ನಿಮ್ಮ ದಿಟ್ಟತನ ಪ್ರದರ್ಶಿಸಿ’ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು