ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಐಎಂ–ಸಿ ನಿರ್ದೇಶಕಿ ಅಂಜು ಸೇಠ್ ರಾಜೀನಾಮೆ

Last Updated 23 ಮಾರ್ಚ್ 2021, 14:42 IST
ಅಕ್ಷರ ಗಾತ್ರ

ಕೋಲ್ಕತ್ತ: ಕೋಲ್ಕತ್ತದಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ನ (ಐಐಎಂ–ಸಿ) ಮೊದಲ ಮಹಿಳಾ ನಿರ್ದೇಶಕಿ ಎಂಬ ಗೌರವಕ್ಕೆ ಪಾತ್ರರಾಗಿದ್ದ ಅಂಜು ಸೇಠ್‌, ಸಹೋದ್ಯೋಗಿಗಳ ಜೊತೆಗೆ ಮನಃಸ್ತಾಪದ ಕಾರಣಗಳಿಂದ ಮಂಗಳವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಸಂಸ್ಥೆಯಲ್ಲಿ ತಮ್ಮ ಅವಧಿ ಪೂರ್ಣಗೊಳ್ಳಲು ಇನ್ನೂ ಒಂದು ವರ್ಷ ಬಾಕಿ ಇರುವಾಗಲೇ ಅವರು ಹುದ್ದೆಯಿಂದ ಕೆಳಗಿಳಿದಿದ್ದಾರೆ. ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ಪತ್ರ ಬರೆದಿರುವ ಅವರು, ತಮ್ಮನ್ನು ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕೆಂದು ಕೋರಿದ್ದಾರೆ. ‌

’ನಾನು ಭಾನುವಾರ ರಾಜೀನಾಮೆ ಪತ್ರ ಕಳುಹಿಸಿದ್ದೇನೆ. ಸಂಸ್ಥೆಯಲ್ಲಿ ನನ್ನ ಕನಸು ಅರ್ಧ ನನಸಾಗಿದೆಯಷ್ಟೇ. ಅಷ್ಟರಲ್ಲಿಯೇ ರಾಜೀನಾಮೆ ನೀಡಬೇಕಾಗಿದ್ದರಿಂದ ನನಗೆ ತುಂಬಾ ಬೇಸರವಾಗಿದೆ. ಇದನ್ನು ನಾನು ಬಯಸಿರಲಿಲ್ಲ‘ ಎಂದು ರಾಜೀನಾಮೆ ಕುರಿತು ಹೇಳಿದ್ದಾರೆ.

2018ರಲ್ಲಿ ಅಂಜು ಸೇಠ್‌, ಐಐಎಂ–ಸಿ ನಿರ್ದೇಶಕಿಯಾಗಿ ಅಧಿಕಾರ ಸ್ವೀಕರಿಸುವ ಮೂಲಕ ಸಂಸ್ಥೆಯ ಮೊದಲ ಮಹಿಳಾ ನಿರ್ದೇಶಕಿ ಎಂದು ಗುರುತಿಸಿಕೊಂಡಿದ್ದರು.

ಸಂಸ್ಥೆಯ ಬೋಧಕ ಸಿಬ್ಬಂದಿ ಜೊತೆಗಿನ ಮನಃಸ್ತಾಪವೇ ಅಂಜು ಸೇಠ್‌ ರಾಜೀನಾಮೆ ನೀಡಲು ಕಾರಣ ಎನ್ನಲಾಗಿದೆ. ಇತ್ತೀಚೆಗೆ ಸಂಸ್ಥೆಯ ಪ್ರಾಧ್ಯಾಪಕರು ಅಂಜು ಸೇಠ್‌ ಅವರ ನಡವಳಿಕೆ ಬಗ್ಗೆ ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ದೂರು ನೀಡಿದ್ದರು. ಇದಕ್ಕೆ ಪ್ರತ್ಯುತ್ತರ ನೀಡಿರುವ ಸೇಠ್‌ ಅವರು, ‘ಬೋಧಕ ಸಿಬ್ಬಂದಿ ತಮ್ಮ ಐಐಎಂ–ಸಿ ನಿರ್ದೇಶಕ ಸ್ಥಾನದ ಅಧಿಕಾರವನ್ನು ತಡೆಯುತ್ತಿದ್ದಾರೆ ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT