ಗುರುವಾರ , ಮೇ 26, 2022
26 °C

ಬಾಂಬೆ ಐಐಟಿಯ ಸ್ನಾತಕೋತ್ತರ ವಿದ್ಯಾರ್ಥಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಬಾಂಬೆ ಐಐಟಿಯ ಸ್ನಾತಕೋತ್ತರ ವಿದ್ಯಾರ್ಥಿಯೊಬ್ಬ ಸೋಮವಾರ ಮುಂಜಾನೆ ಇಲ್ಲಿನ ಪೊವಾಯಿಯ ಕ್ಯಾಂಪಸ್‌ನಲ್ಲಿರುವ ಹಾಸ್ಟೆಲ್‌ನಲ್ಲಿ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸಂತ್ರಸ್ತ ವಿದ್ಯಾರ್ಥಿಯನ್ನು ದರ್ಶನ್‌ ಮಾಳವೀಯ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿ ಮಧ್ಯಪ್ರದೇಶದ ಮೂಲದವರು ಎನ್ನಲಾಗಿದೆ. 

ಆಕಸ್ಮಿಕ ಸಾವು ಪ್ರಕರಣ ದಾಖಲಾಗಿದೆ. ತನ್ನ ಸಾವಿಗೆ ಯಾರನ್ನೂ ಹೊಣೆ ಮಾಡಬಾರದು ಎಂದು ವಿದ್ಯಾರ್ಥಿಯು ಆತ್ಮಹತ್ಯಾ ಪತ್ರದಲ್ಲಿ ಬರೆದಿದ್ದಾರೆ. 

2021ರ ಮಧ್ಯದ ಸಮಯದಲ್ಲಿ ವಿದ್ಯಾರ್ಥಿ ದರ್ಶನ್‌ ಮಾಳವೀಯ ಬಾಂಬೆನ ಐಐಟಿಗೆ ‍ಪ್ರವೇಶ ಪಡೆಯುವ ಮುನ್ನ ಖಿನ್ನತೆಯಿಂದ ಬಳಲುತ್ತಿದ್ದರು. ಅಲ್ಲದೆ ಇದಕ್ಕಾಗಿ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು ಎಂದು ಪೊಲೀಸರ ಪ್ರಾಥಮಿಕ ವರದಿಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು