ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಂಬೆ ಐಐಟಿ ವಿದ್ಯಾರ್ಥಿ ಸಾವು: ಜಾತಿ ತಾರತಮ್ಯ ನಡೆದಿಲ್ಲ– ವಿಚಾರಣಾ ಸಮಿತಿ

Last Updated 6 ಮಾರ್ಚ್ 2023, 16:29 IST
ಅಕ್ಷರ ಗಾತ್ರ

ಮುಂಬೈ: ಐಐಟಿ ಬಾಂಬೆಯ ವಿದ್ಯಾರ್ಥಿ ದರ್ಶನ್ ಸೋಲಂಕಿಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಶಿಕ್ಷಣ ಸಂಸ್ಥೆಯು ಸ್ಥಾಪಿಸಿದ್ದ ವಿಚಾರಣಾ ಸಮಿತಿಯು ತನ್ನ ವರದಿಯಲ್ಲಿ ವಿದ್ಯಾರ್ಥಿಯೊಂದಿಗೆ ಜಾತಿ ಆಧಾರಿತ ತಾರತಮ್ಯ ನಡೆದಿರುವ ಆರೋಪವನ್ನು ತಳ್ಳಿ ಹಾಕಿದೆ.

ವಿದ್ಯಾರ್ಥಿಯ ಸಾವಿಗೆ ಶೈಕ್ಷಣಿಕ ಕಾರ್ಯಕ್ಷಮತೆ ಕ್ಷೀಣಿಸುತ್ತಿರುವುದೇ ಸಂಭವನೀಯ ಕಾರಣವಾಗಿರಬಹುದು ಎನ್ನುವ ಸುಳಿವನ್ನೂ ಸಮಿತಿಯು ನೀಡಿದೆ.

ಅಹಮದಾಬಾದ್‌ನ ದರ್ಶನ್ ಬಿ.ಟೆಕ್ (ಕೆಮಿಕಲ್) ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದ ಅವರು ಫೆ. 12ರಂದು ಐಐಟಿ ಬಾಂಬೆಯ ಪೊವೈ ಕ್ಯಾಂಪಸ್‌ನಲ್ಲಿರುವ ಹಾಸ್ಟೆಲ್‌ನ 7ನೇ ಮಹಡಿಯಿಂದ ಜಿಗಿದು ಸಾವಿಗೀಡಾಗಿದ್ದ. ದರ್ಶನ್ ಪರಿಶಿಷ್ಟ ಜಾತಿಗೆ ಸೇರಿದ್ದ ಕಾರಣ ಆತ ಜಾತಿ ತಾರತಮ್ಯ ಎದುರಿಸುತ್ತಿದ್ದ ಎಂದು ಆತನ ಕುಟುಂಬದವರು ಆರೋಪಿಸಿದ್ದರು.

ಘಟನೆಗೆ ಸಂಬಂಧಿಸಿದಂತೆ ಐಐಟಿ (ಬಿ)ಯ ಅಧಿಕಾರಿಗಳು, ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ನಂದ ಕಿಶೋರ್ ಅವರ ನೇತೃತ್ವದಲ್ಲಿ 12 ಸದಸ್ಯರ ತನಿಖಾ ಸಮಿತಿಯನ್ನು ರಚಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT