ಕೋವಿಡ್ ಕ್ಲಸ್ಟರ್ ಆದ ಐಐಟಿ ಮದ್ರಾಸ್: 25ಕ್ಕೂ ಹೆಚ್ಚು ಜನರಿಗೆ ಸೋಂಕು ದೃಢ

ಚೆನ್ನೈ: ಹೊಸದಾಗಿ 25 ಮಂದಿಗೆ ಕೋವಿಡ್ ದೃಢಪಟ್ಟಿದ್ದು, ಮದ್ರಾಸ್‌ನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ–ಎಂ)ಯಲ್ಲಿ ಕೊರೊನಾ ವೈರಸ್ ಸೋಂಕಿತರ ಒಟ್ಟು ಸಂಖ್ಯೆ 55ಕ್ಕೆ ಏರಿದೆ ಎಂದು ತಮಿಳುನಾಡು ಆರೋಗ್ಯ ಕಾರ್ಯದರ್ಶಿ ಜೆ ರಾಧಾಕೃಷ್ಣನ್ ಹೇಳಿದ್ದಾರೆ.
ಐಐಟಿ-ಎಂ ಆವರಣದಲ್ಲಿರುವ 19 ಹಾಸ್ಟೆಲ್‌ಗಳಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಇತರ ರಾಜ್ಯಗಳ ವಿದ್ಯಾರ್ಥಿಗಳನ್ನು ಹೊಂದಿರುವ ಹಾಸ್ಟೆಲ್‌ನಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.
ಸರ್ಕಾರವು ಕೋವಿಡ್ -19 ಪರೀಕ್ಷೆಗಳ ಸಂಖ್ಯೆಯನ್ನು ದಿನಕ್ಕೆ 18,000 ದಿಂದ 25,000 ಕ್ಕೆ ಹೆಚ್ಚಿಸಲಿದೆ ಎಂದೂ ಅವರು ಹೇಳಿದರು.
ಅಲ್ಲಿನ ರಾಜ್ಯ ಸರ್ಕಾರದ ಪ್ರಕಟಣೆ ಪ್ರಕಾರ, ಶುಕ್ರವಾರ ತಮಿಳುನಾಡಿನಲ್ಲಿ 57 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 286 ರಷ್ಟಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.