ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಐಟಿ ಮದ್ರಾಸ್‌ನ 100ಕ್ಕೂ ಹೆಚ್ಚು ಮಂದಿಗೆ ಕೋವಿಡ್‌ ದೃಢ: ಕಾರ್ಯಾಚರಣೆ ಸ್ಥಗಿತ

Last Updated 14 ಡಿಸೆಂಬರ್ 2020, 11:21 IST
ಅಕ್ಷರ ಗಾತ್ರ

ಚೆನ್ನೈ: ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ–ಮದ್ರಾಸ್‌ನ (ಐಐಟಿಎಂ) ಸುಮಾರು 100 ಮಂದಿಗೆ ಕೋವಿಡ್‌–19 ದೃಢಪಟ್ಟಿದೆ ಎಂದು ಸೋಮವಾರ ಆರೋಗ್ಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಒಟ್ಟು 104 ಮಂದಿ ವಿದ್ಯಾರ್ಥಿಗಳು ಹಾಗೂ ಇತರರಿಗೆ ಕೊರೊನಾ ವೈರಸ್‌ ಸೋಂಕು ತಗುಲಿದೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ತಮಿಳುನಾಡು ಆರೋಗ್ಯ ಕಾರ್ಯದರ್ಶಿ ಜೆ.ರಾಧಾಕೃಷ್ಣನ್‌ ಹೇಳಿದ್ದಾರೆ.

ಐಐಟಿಯಲ್ಲಿ ಡಿಸೆಂಬರ್‌ 1ರಿಂದ 12ರ ವರೆಗೂ 444 ಮಾದರಿಗಳನ್ನು ಕೋವಿಡ್‌–19 ಪರೀಕ್ಷೆಗೆ ಒಳಪಡಿಸಲಾಗಿದ್ದು, 104 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಒಂದೇ ದಿನದಲ್ಲಿ 33 ಜನರಿಗೆ ಕೋವಿಡ್‌ ಇರುವುದು ಪತ್ತೆಯಾಗಿದೆ. 'ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರ ನಿರ್ದೇಶನದಂತೆ ಎಲ್ಲ ಸೋಂಕಿತರಿಗೂ ಕಿಂಗ್ಸ್‌ ಇನ್‌ಸ್ಟಿಟ್ಯೂಟ್‌ ಆಫ್‌ ಪ್ರಿವೆನ್ಟೀವ್‌ ಮೆಡಿಸಿನ್‌ ಆ್ಯಂಡ್‌ ರಿಸರ್ಚ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ' ಎಂದಿದ್ದಾರೆ.

'ಶಿಕ್ಷಣ ಸಂಸ್ಥೆಯ ಎಲ್ಲ ವಿಭಾಗಗಳು ಹಾಗೂ ಪ್ರಯೋಗಾಲಯಗಳನ್ನು ಮುಚ್ಚಲಾಗಿದೆ. ಪ್ರಸ್ತುತ ಸುಮಾರು 700 ಮಂದಿ ಸಂಶೋಧನಾ ವಿದ್ಯಾರ್ಥಿಗಳು ಒಂಬತ್ತು ಹಾಸ್ಟೆಲ್‌ಗಳಲ್ಲಿ ಉಳಿದಿದ್ದಾರೆ. ಆನ್‌ಲೈನ್‌ ಮೂಲಕ ಪಾಠ–ಪ್ರವಚನ ನಡೆಸಲಾಗುತ್ತಿದೆ' ಎಂದು ಮದ್ರಾಸ್‌ ಐಐಟಿಯ ವಕ್ತಾರರು ತಿಳಿಸಿದ್ದಾರೆ.

ಸೋಂಕಿತರೊಂದಿಗೆ ಸಂಪರ್ಕಕ್ಕೆ ಬಂದಿರುವವರನ್ನು ಪತ್ತೆ ಮಾಡುವ ಕಾರ್ಯ ಚುರುಕುಗೊಳಿಸಲಾಗಿದೆ ಎಂದು ರಾಧಾಕೃಷ್ಣನ್‌ ಹೇಳಿದ್ದಾರೆ. ಆರೋಗ್ಯ ಅಧಿಕಾರಿಗಳು ಐಐಟಿ ಕ್ಯಾಂಪಸ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೋವಿಡ್‌–19 ದೃಢಪಟ್ಟವರಲ್ಲಿ ಬಹುತೇಕ ವಿದ್ಯಾರ್ಥಿಗಳು ಹಾಗೂ ಕೆಲವು ಮಂದಿ ಕ್ಯಾಂಟೀನ್‌ ಕೆಲಸಗಾರರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT