ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾದೇಶಿಕ ಭಾಷೆಯಲ್ಲೂ ಎಂಜಿನಿಯರಿಂಗ್‌ ಕೋರ್ಸ್‌

Last Updated 27 ನವೆಂಬರ್ 2020, 18:42 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಮತ್ತು ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ (ಎನ್‌ಐಟಿ) ಮುಂದಿನ ಶೈಕ್ಷಣಿಕ ವರ್ಷದಿಂದ ಎಂಜಿನಿಯರಿಂಗ್‌ ಕೋರ್ಸ್‌ಗಳನ್ನು ಪ್ರಾದೇಶಿಕ ಭಾಷೆ ಗಳಲ್ಲಿಯೂ ಬೋಧಿಸಲು ನಿರ್ಧರಿಸ ಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲ ಯದ ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಶಿಕ್ಷಣ ಸಚಿವ ರಮೇಶ್‌ ಪೋಖ್ರಿಯಾಲ್‌ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಪ್ರಾದೇಶಿಕ ಭಾಷೆಗಳಲ್ಲಿ ಕೋರ್ಸ್‌ ಬೋಧನೆ ನಡೆಸಲು ಕೆಲವು ಐಐಟಿ ಮತ್ತು ಎನ್‌ಐಟಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿಲೆಬಸ್‌ ನಿಗದಿ ಮಾಡುವ ಹೊಣೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (ಎನ್‌ಟಿಎ) ವಹಿಸುವುದಕ್ಕೂ ಪೋಖ್ರಿಯಾಲ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಕೋವಿಡ್‌ನಿಂದಾಗಿ ಸಿಲೆಬಸ್‌ ಮೊಟಕಾಗಿರುವ ಕಾರಣ, ಪ್ರಸ್ತುತ ಸನ್ನಿವೇಶಕ್ಕೆ ಅನುಗುಣವಾಗಿ ಸ್ಪರ್ಧಾತ್ಮಕ ಪರೀಕ್ಷೆಯ ಸಿಲೆಬಸ್‌ ಸಿದ್ಧಪಡಿಸುವುದು ಅಗತ್ಯವಾಗಿದೆ.

2021ರಿಂದ ಜೆಇಇ (ಮೇನ್‌) ಅನ್ನು ಒಂಬತ್ತು ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವ ನಿರ್ಧಾರವನ್ನು ಎನ್‌ಟಿಎ ಕಳೆದ ತಿಂಗಳು ಪ್ರಕಟಿಸಿತ್ತು. ಈಗ, ಇಂಗ್ಲಿಷ್‌ ಮತ್ತು ಹಿಂದಿ ಭಾಷೆಯಲ್ಲಿ ಮಾತ್ರ ಜೆಇಇ (ಮೇನ್‌) ನಡೆಸಲಾಗುತ್ತಿದೆ. ಜೆಇಇಗೆ (ಅಡ್ವಾನ್ಸಡ್‌) ಪ್ರಾದೇಶಿಕ ಭಾಷೆಯಲ್ಲಿ ಅವಕಾಶ ಕಲ್ಪಿಸುವ ಬಗ್ಗೆ ಐಐಟಿಗಳು ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT