ಭಾನುವಾರ, ಮೇ 29, 2022
29 °C
ಅಕ್ರಮ ಮರಳು ಮಾಫಿಯಾದಿಂದ ಚುನಾವಣೆಗೆ

ಪಂಜಾಬ್ ಚುನಾವಣೆ: ಸಿಎಂ ಚನ್ನಿ ಅಳಿಯನ ಮನೆ ಮೇಲೆ ದಾಳಿ ಮಾಡಿದ ಇ.ಡಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಮುಂದಿನ ತಿಂಗಳು ಚುನಾವಣೆ ನಡೆಯಲಿರುವ ಪಂಜಾಬ್‌ನಲ್ಲಿ ಮರಳು ಮಾಫಿಯಾ ಅಡ್ಡೆಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಮಂಗಳವಾರ ದಾಳಿ ಮಾಡಿದೆ.

ಚುನಾವಣೆಯ ಹಿನ್ನೆಲೆಯಲ್ಲಿ ಹಣ ಅಕ್ರಮ ವರ್ಗಾವಣೆಯ ದೂರುಗಳು ಬಂದಿದ್ದರಿಂದ ಇ.ಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.

ಪ್ರಮುಖವಾಗಿ ಇ.ಡಿ ಅಧಿಕಾರಿಗಳು ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಅವರ ಅಳಿಯ ಭೂಪೆಂದ್ರ ಸಿಂಗ್ ಹನಿ ಅವರ ಮನೆ ಮೇಲೆ ದಾಳಿ ಮಾಡಿದ್ದಾರೆ. ಹಣ ಅಕ್ರಮ ವರ್ಗಾವಣೆ ಹಾಗೂ ಕಾನೂನು ಬಾಹಿರ ಮರಳು ದಂಧೆಯಲ್ಲಿ ಅವರ ಹೆಸರು ಕೇಳಿ ಬಂದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಂಜಾಬ್‌ನ 10 ರಿಂದ 12 ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಲಾಗಿದ್ದು, ಕೆಲವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೀಗೆ ವಶಕ್ಕೆ ತೆಗೆದುಕೊಂಡವರಲ್ಲಿ ಬಹುತೇಕರು ರಾಜಕೀಯ ನಾಯಕರ ಜೊತೆ ನಂಟು ಹೊಂದಿದ್ದಾರೆ ಎನ್ನಲಾಗಿದೆ.

ಪಂಜಾಬ್ ವಿಧಾನಸಭೆಯ 117 ಸ್ಥಾನಗಳಿಗೆ ಫೆಬ್ರುವರಿ 20 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು