ಶನಿವಾರ, ಡಿಸೆಂಬರ್ 4, 2021
20 °C

ಐಎಂಎ ವಂಚನೆ ಪ್ರಕರಣ: ಇಬ್ಬರು ಅಧಿಕಾರಿಗಳ ವಿರುದ್ಧ ಚಾರ್ಚ್‌ಶೀಟ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಐಎಂಎ ಕಂಪನಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲೀನ್‌ಚಿಟ್‌ ನೀಡಲು ಆರೋಪಿ ಮನ್ಸೂರ್ ಖಾನ್‌ನಿಂದ ಲಂಚ ಪಡೆದ ಆರೋಪದಡಿ ಕರ್ನಾಟಕದ ಇಬ್ಬರು ಅಧಿಕಾರಿಗಳ ವಿರುದ್ಧ ಸಿಬಿಐ ದೋಷಾರೋಪ ಪಟ್ಟಿ ದಾಖಲಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. 

₹ 4,000 ಕೋಟಿ ವಂಚನೆ ಪ್ರಕರಣದಲ್ಲಿ ಬೆಂಗಳೂರು ಉತ್ತರ ತಾಲ್ಲೂಕು ಉಪವಿಭಾಗಾಧಿಕಾರಿಯಾಗಿದ್ದ  ಎಲ್‌.ಸಿ.ನಾಗರಾಜ್‌ ಹಾಗೂ ಗ್ರಾಮ ಲೆಕ್ಕಿಗ ಮಂಜುನಾಥ್‌ ಎನ್‌. ವಿರುದ್ಧ ತನಿಖೆಗೆ ರಾಜ್ಯ ಸರ್ಕಾರದ ಒಪ್ಪಿಗೆ ಪಡೆದ ಬಳಿಕ ಸಿಬಿಐ ಈ ದೋಷಾರೋಪ ಪಟ್ಟಿ ದಾಖಲಿಸಿದೆ. ಖಾನ್‌ನಿಂದ ನಾಗರಾಜ್‌ ₹4.5 ಕೋಟಿ ಹಾಗೂ ಮಧ್ಯವರ್ತಿಯಾಗಿದ್ದ ಮಂಜುನಾಥ್‌ ₹10 ಲಕ್ಷ ಲಂಚ ಪಡೆದಿದ್ದರು ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. 

ಪ್ರಕರಣದ ಕುರಿತ ಎಫ್‌ಐಆರ್‌ನಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಬಿ.ಎಂ.ವಿಜಯ್‌ ಶಂಕರ್‌ ಅವರ ಹೆಸರಿದ್ದರೂ, ಅವರು ಮೃತಪಟ್ಟಿರುವ ಕಾರಣ ದೋಷಾರೋಪ ಪಟ್ಟಿಯಲ್ಲಿ ಅವರ ಹೆಸರು ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಐಎಂಎ ಜ್ಯುವೆಲ್ಸ್‌ನ ಚಟುವಟಿಕೆಗಳ ಬಗ್ಗೆ ದೂರುಗಳು ಕೇಳಿಬಂದ ಸಂದರ್ಭದಲ್ಲಿ ತನಿಖೆ ನಡೆಸಲು ಸರ್ಕಾರವು ಜಿಲ್ಲಾ ಆಡಳಿತಕ್ಕೆ ಸೂಚಿಸಿತ್ತು. ಈ ಸಂದರ್ಭದಲ್ಲಿ ಐಎಂಎ ಬಂಡವಾಳ ಸಂಸ್ಥೆಯಲ್ಲಿ ಯಾವುದೇ ಅವ್ಯವಹಾರಗಳಿಲ್ಲ ಎಂದು ಎಲ್‌.ಸಿ.ನಾಗರಾಜ್ ವರದಿ ತಯಾರಿಸಿ, ಖಾನ್‌ಗೆ ಕ್ಲೀನ್‌ಚಿಟ್‌ ನೀಡಿದ್ದರು. ಈ ವರದಿಯನ್ನು ಪರಿಶೀಲಿಸದೆಯೇ ಶಂಕರ್‌ ಅವರು ಅದನ್ನು ಸರ್ಕಾರಕ್ಕೆ ಸಲ್ಲಿಸಿದ್ದರು’ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ‌   

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.