ಶುಕ್ರವಾರ, ಅಕ್ಟೋಬರ್ 30, 2020
27 °C

ಕೋವಿಡ್‌–19ಗೆ ಸುಮಾರು 400 ವೈದ್ಯರ ಸಾವು: ವಿಮೆ ಮೊತ್ತ ಪಡೆದ ಕುಟುಂಬ ಕೇವಲ 64

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದಲ್ಲಿ ಕೋವಿಡ್‌–19ಕ್ಕೆ ಅಂದಾಜು 400 ವೈದ್ಯರು ಮೃತಪಟ್ಟಿದ್ದಾರೆ. ಆದರೆ ಈ ಪೈಕಿ 64 ವೈದ್ಯರ ಕುಟುಂಬಗಳು ₹ 50 ಲಕ್ಷ ಕೋವಿಡ್‌–19 ವಿಮಾ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿವೆ. 

‘ಸಂಖ್ಯೆಯಲ್ಲಿನ ಈ ವ್ಯತ್ಯಾಸವು ಖಾಸಗಿ ವೈದ್ಯರು, ಆರೋಗ್ಯ ಕಾರ್ಯಕರ್ತರ ತ್ಯಾಗದಲ್ಲಿ ಸರ್ಕಾರವು ಮಾಡಿದಂತಹ ಉಪೇಕ್ಷೆಯನ್ನು ತೋರಿಸುತ್ತದೆ. ಬೇರೆ ಯಾವುದೇ ದೇಶದಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರು ಮೃತಪಟ್ಟಿಲ್ಲ’ ಎಂದು ಭಾರತೀಯ ವೈದ್ಯಕೀಯ ಸಂಘವು(ಐಎಂಎ) ಪ್ರಕಟಣೆಯಲ್ಲಿ ತಿಳಿಸಿದೆ.

ಶುಕ್ರವಾರ, ಸಂಸತ್‌ನಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದ ಆರೋಗ್ಯ ಸಚಿವಾಲಯದ ರಾಜ್ಯ ಖಾತೆ ಸಚಿವರಾದ ಅಶ್ವಿನಿ ಕುಮಾರ್‌ ಚೌಬೆ, ‘64 ವೈದ್ಯರ ಕುಟುಂಬಗಳು ಹಾಗೂ 91 ಆರೋಗ್ಯ ಕಾರ್ಯಕರ್ತರ ಕುಟುಂಬಗಳು ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ್‌ ವಿಮಾ ಪ್ಯಾಕೆಜ್‌ನಡಿ ಅರ್ಜಿ ಸಲ್ಲಿಸಿವೆ’ ಎಂದು ಮಾಹಿತಿ ನೀಡಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು