ಮಂಗಳವಾರ, ಡಿಸೆಂಬರ್ 7, 2021
20 °C

ಗುಜರಾತ್‌ನಲ್ಲಿ 'ಗುಲಾಬ್‌': ಅ.2ರವರೆಗೆ ಮೀನುಗಾರಿಕೆ ಸ್ಥಗಿತಕ್ಕೆ ಐಎಂಡಿ ಸೂಚನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಹಮದಾಬಾದ್‌: ದಕ್ಷಿಣ ಗುಜರಾತ್‌ನಲ್ಲಿ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿರುವ ಭಾರತೀಯ ಹವಾಮಾನ ಇಲಾಖೆ, ಅ.2ರವರೆಗೆ ರಾಜ್ಯದ ಕರಾವಳಿ ಭಾಗದಲ್ಲಿರುವ ಅರಬ್ಬಿ ಸಮುದ್ರದಲ್ಲಿ ಸಂಪೂರ್ಣವಾಗಿ ಮೀನುಗಾರಿಕೆ ಸ್ಥಗಿತಗೊಳಿಸುವಂತೆ ಮೀನುಗಾರರಿಗೆ ಸೂಚನೆ ನೀಡಿದೆ.

ಇದೇ ವೇಳೆ ಮೀನುಗಾರಿಕೆಗಾಗಿ ಈಗಾಗಲೇ ಸಮುದ್ರಕ್ಕೆ ತೆರಳಿರುವವವರಿಗೆ ಕರಾವಳಿ ತೀರಕ್ಕೆ ಹಿಂದಿರುಗುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ದಕ್ಷಿಣ ಗುಜರಾತ್ ಮತ್ತು ಸೌರಾಷ್ಟ್ರ ಸೇರಿದಂತೆ ವಿವಿಧ ಭಾಗಗಳಲ್ಲಿ ಮಂಗಳವಾರ ಮತ್ತು ಬುಧವಾರ ಭಾರೀ ಮಳೆಯಾಗುತ್ತಿದ್ದು, ರಾಜ್ಯದಾದ್ಯಂತ ಮುಂದಿನ ಎರಡು ದಿನಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು