ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರಿ ಮಳೆ ಮುನ್ಸೂನಚೆ: ಕೇರಳದ ಹನ್ನೊಂದು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

Last Updated 19 ಅಕ್ಟೋಬರ್ 2021, 9:46 IST
ಅಕ್ಷರ ಗಾತ್ರ

ಕೊಚ್ಚಿ: ಕೇರಳದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮಂಗಳವಾರ ರಾಜ್ಯದ 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಘೋಷಿಸಿದೆ.

ಹವಾಮಾನ ತಜ್ಞರು ಅ.20ರಂದು ರಾಜ್ಯದ 12 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಘೋಷಿಸಿದ್ದಾರೆ. ಈ ಸೂಚನೆ ಗುರುವಾರವೂ (ಅ.21) ಮುಂದುವರಿಯಲಿದೆ. ಆರೆಂಜ್ ಅಲರ್ಟ್‌ ಘೋಷಿಸಿರುವ ಜಿಲ್ಲೆಗಳು: ತಿರುವನಂತಪುರ, ಪತ್ತನಂತಿಟ್ಟ, ಕೋಟಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್ ಮತ್ತು ಕಣ್ಣೂರು.

ಭಾರಿ ಮಳೆಯ ಮುನ್ಸೂಚನೆಯ ಕಾರಣ ಅ. 21ರಂದು ಕಣ್ಣೂರು ಮತ್ತು ಕಾಸರಗೋಡು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT