ಶುಕ್ರವಾರ, ಅಕ್ಟೋಬರ್ 23, 2020
21 °C

ಭಾರಿ ಮಳೆ: ಕಾಸರಗೋಡು ಸೇರಿ ಕೇರಳದ 4 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

waterlogged street after heavy rain, in Kozhikode - PTI Image

ತಿರುವನಂತಪುರ: ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು ಕಾಸರಗೋಡು, ಕಣ್ಣೂರು, ಮಲಪ್ಪುರಂ ಹಾಗೂ ಇಡುಕ್ಕಿ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಿಸಿದೆ.

ಕೋಟ್ಟಯಂ, ತ್ರಿಶೂರ್, ಕೋಯಿಕ್ಕೋಡ್, ಎರ್ನಾಕುಲಂ, ವಯನಾಡ್‌ ಹಾಗೂ ಪಾಲಕ್ಕಾಡ್‌ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ರಾಜಧಾನಿ ತಿರುವನಂತಪುರ ಸೇರಿದಂತೆ ಇತರ ಜಿಲ್ಲೆಗಳಲ್ಲಿಯೂ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: 

‘ಈಶಾನ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕೇರಳದ ಪಶ್ಚಿಮ ಕರಾವಳಿಯಲ್ಲಿ ಮುಂದಿನ ಕೆಲವು ದಿನಗಳ ವರೆಗೆ ತೀವ್ರವಾದ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ಕೆಲವು ಪ್ರದೇಶಗಳಲ್ಲಿ ಗಾಳಿ, ಮಳೆ ವ್ಯಾಪಕವಾಗಿರಲಿದೆ’ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ.

ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿರುವ ಜಿಲ್ಲೆಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳನ್ನು (ಎನ್‌ಡಿಆರ್‌ಎಫ್) ನಿಯೋಜಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು