ಸೋಮವಾರ, ಸೆಪ್ಟೆಂಬರ್ 26, 2022
24 °C
ಒಡಿಶಾದಲ್ಲಿ ಮನೆ ಕುಸಿದು 6 ಮಂದಿಗೆ ಗಾಯ

ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಕೇರಳದಲ್ಲಿ ಜಲಾಶಯಗಳು ಭರ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಂಬೈ/ಇಡುಕ್ಕಿ/ಭುವನೇಶ್ವರ: ಮಹಾರಾಷ್ಟ್ರ, ಕೇರಳ ಮತ್ತು ಒಡಿಶಾದಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಹಾರಾಷ್ಟ್ರ, ಒಡಿಶಾದ ಹಲವೆಡೆ ಇನ್ನೂ ಕೆಲ ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್‌ ಘೋಷಿಸಿದೆ. ಕೇರಳದ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ಇಡುಕ್ಕಿ, ಮಲಪ್ಪುರ ಸೇರಿದಂತೆ ಹಲವು ಅಣೆಕಟ್ಟೆಗಳಿಂದ ನೀರನ್ನು ಹೊರಬಿಡಲಾಗಿದೆ.

ಮಹಾರಾಷ್ಟ್ರದ ಉತ್ತರ ಕೊಂಕಣ ಮತ್ತು ಉತ್ತರ ಕೇಂದ್ರ, ಪೂರ್ವ ಮತ್ತು ಪಶ್ಚಿಮ ವಿದರ್ಭ ಪ್ರದೇಶಗಳಲ್ಲಿ ಇದೇ 12ರ ವರೆಗೂ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು