ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಗಾರಿಗೂ ಮೊದಲೇ ಕೇರಳದಾದ್ಯಂತ ಭಾರಿ ಮಳೆ: 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್

ಎರ್ನಾಕುಲಂ, ಇಡುಕ್ಕಿ, ತ್ರಿಶ್ಶೂರ್‌, ಕಲ್ಲಿಕೋಟೆ, ಕಣ್ಣೂರು ಜಿಲ್ಲೆಗಳಿಗೆ ಎಚ್ಚರಿಕೆ
Last Updated 15 ಮೇ 2022, 13:04 IST
ಅಕ್ಷರ ಗಾತ್ರ

ತಿರುವನಂತಪುರ: ನೈಋತ್ಯ ಮುಂಗಾರು ಪ್ರವೇಶಕ್ಕೆ ಪೂರ್ವಭಾವಿಯಾಗಿ ಕೇರಳದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಐದು ಜಿಲ್ಲೆಗಳಾದಎರ್ನಾಕುಲಂ, ಇಡುಕ್ಕಿ, ತ್ರಿಶ್ಶೂರ್‌, ಕೋಯಿಕ್ಕೋಡ್‌, ಕಣ್ಣೂರುಗಳಲ್ಲಿ ಸೋಮವಾರದವರೆಗೆ ರೆಡ್ ಅಲರ್ಟ್‌ ಘೋಷಿಸಲಾಗಿದೆ.

ಕಾಸರಗೋಡು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಭಾನುವಾರ ಆರೆಂಜ್‌ ಅಲರ್ಟ್‌ಅನ್ನುಭಾರತೀಯ ಹವಾಮಾನ ಇಲಾಖೆ (ಐಎಂಡಿ) ಘೋಷಿಸಿತ್ತು.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ರಾಜ್ಯ ಕಂದಾಯ ಸಚಿವ ಕೆ.ರಾಜನ್‌, ‘ರಾಜ್ಯದಲ್ಲಿ ಸದ್ಯಕ್ಕೆ ನಿರಾಶ್ರಿತರ ಶಿಬಿರಗಳ ಅಗತ್ಯ ಇಲ್ಲ. ಮಳೆ ಇದೇ ರೀತಿ ಮುಂದುವರಿದರೆ ಭೂಕುಸಿತ ಉಂಟಾಗುವ ಸಾಧ್ಯತೆ ಇದೆ. ಅಪಾಯಪೀಡಿತ ಸ್ಥಳಗಳಿಂದ ಜನರನ್ನು ತಡಮಾಡದೇ ಸ್ಥಳಾಂತರಿಸಲು ಸಂಬಂಧಿತ ಇಲಾಖೆಗೆಳಿಗೆ ಸೂಚಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT