ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದ ಒಂಬತ್ತು ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’

Last Updated 20 ಮೇ 2022, 11:15 IST
ಅಕ್ಷರ ಗಾತ್ರ

ತಿರುವನಂತಪುರಂ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭಾರತೀಯ ಹವಾಮಾನ ಇಲಾಖೆಯು ಕೇರಳದ ಒಂಬತ್ತು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಿಸಿದೆ.

ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಎರ್ನಾಕುಳಂ, ಇಡುಕ್ಕಿ, ತ್ರಿಶೂರ್, ಮಲಪ್ಪುರಂ ಮತ್ತು ಕೋಯಿಕ್ಕೋಡ್‌ ಜಿಲ್ಲೆಗಳಲ್ಲಿ ಸುಮಾರು 6 ರಿಂದ 11 ಸೆಂ.ಮೀ. ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ.‌

ಕೇರಳ ಹಾಗೂ ಲಕ್ಷದ್ವೀಪದ ಕೆಲವು ಪ್ರದೇಶಗಳಲ್ಲಿ ಗುಡುಗು, ಸಿಡಿಲು ಸಹಿತ ವಿಪರೀತ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT