ಶನಿವಾರ, ಜನವರಿ 23, 2021
28 °C

ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಮತ್ತು ಮಂಗಳವಾರ ಮತ್ತಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಭಾರತದಲ್ಲಿ ಶೀತದ ವಾತಾವರಣ ಇರಲಿದ್ದು, ಹಲವು ಪ್ರದೇಶಗಳಲ್ಲಿ ಗುಡುಗು, ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದೂ ಹೇಳಿದೆ.

ದೆಹಲಿಯಲ್ಲಿ ಸೋಮವಾರ ಕನಿಷ್ಠ ತಾಪಮಾನ 10 ಡಿಗ್ರಿ ಮತ್ತು ಗರಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಭಾರಿ ಮಳೆಯ ಕಾರಣದಿಂದಾಗಿ ಭಾನುವಾರ ಕನಿಷ್ಠ ತಾಪಮಾನ 9.9 ಡಿಗ್ರಿ ಮತ್ತು ಗರಿಷ್ಠ ತಾಪಮಾನ 18 ಡಿಗ್ರಿಯಷ್ಟಿತ್ತು.

ಸಫ್ದರ್‌ಜಂಗ್ ವೀಕ್ಷಣಾಲಯದ ಅಂಕಿ–ಅಂಶಗಳ ಪ್ರಕಾರ ರಾಜಧಾನಿಯಲ್ಲಿ ಸಂಜೆ 5.30ರ ವೇಳೆಗೆ 14.8 ಮಿಮೀ ಮಳೆಯಾಗಿದೆ ಎಂದು ತಿಳಿಸಿದೆ.

ಉತ್ತರ ಭಾರತದಲ್ಲಿ ಇನ್ನೂ ಮೂರ್ನಾಲ್ಕು ದಿನಗಳವರಗೆ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆಗಳು ಕಂಡುಬರುವುದಿಲ್ಲ. ದೆಹಲಿ ಹೊರತುಪಡಿಸಿ ಬಿಹಾರ್‌, ಪಶ್ಚಿಮ ಬಂಗಾಳ, ಸಿಕ್ಕಿಂ, ಜಾರ್ಖಂಡ್‌, ಅಸ್ಸಾಂ, ಮೇಘಾಲಯ, ಮಿಜೋರಾಂ ಹಾಗೂ ತ್ರಿಪುರದಲ್ಲಿಯೂ ಇನ್ನೆರಡು ದಿನಗಳವರೆಗೆ ಹಿಮ ಕವಿದ ವಾತಾವರಣ ಇರಲಿದೆ ಎನ್ನಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು