ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಗಸ್ಟ್‌ನಲ್ಲಿ ಶೇ 25ರಷ್ಟು ಹೆಚ್ಚು ಮಳೆ, 44 ವರ್ಷಗಳಲ್ಲೇ ಗರಿಷ್ಠ: ಹವಾಮಾನ ಇಲಾಖೆ

Last Updated 29 ಆಗಸ್ಟ್ 2020, 8:17 IST
ಅಕ್ಷರ ಗಾತ್ರ

ನವದೆಹಲಿ: ಆಗಸ್ಟ್‌ ತಿಂಗಳಿನಲ್ಲಿ ದೇಶದಲ್ಲಿ ಶೇ 25ರಷ್ಟು ಹೆಚ್ಚು ಮಳೆಯಾಗಿದೆ. ಈ ತಿಂಗಳಲ್ಲಿ ಇದು 44 ವರ್ಷಗಳಲ್ಲೇ ಗರಿಷ್ಠ ಪ್ರಮಾಣದ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದೇಶದ ಅನೇಕ ಕಡೆಗಳಲ್ಲಿ ಭಾರಿ ಮಳೆ, ಪ್ರವಾಹ ಪರಿಸ್ಥಿತಿ ಉಂಟಾಗಿರುವ ನಡುವೆಯೇ ಈ ರೀತಿ ವರದಿಯಾಗಿದೆ.

ಈ ಹಿಂದೆ 1983ರ ಆಗಸ್ಟ್‌ನಲ್ಲಿ ಶೇ 23.8 ಹೆಚ್ಚುವರಿ ಮಳೆಯಾಗಿತ್ತು. 1976ರ ಆಗಸ್ಟ್‌ನಲ್ಲಿ ದೇಶದಲ್ಲಿ ಶೇ 28.4ರಷ್ಟು ಹೆಚ್ಚುವರಿ ಮಳೆಯಾಗಿತ್ತು ಎಂದು ಇಲಾಖೆ ತಿಳಿಸಿದೆ.

ಈವರೆಗೆ ದೇಶದಲ್ಲಿ ಮಾಮೂಲಿಗಿಂತ ಶೇ 9ರಷ್ಟು ಹೆಚ್ಚುವರಿ ಮಳೆಯಾಗಿದೆ. ಬಿಹಾರ, ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು, ಗುಜರಾತ್, ಗೋವಾ ರಾಜ್ಯಗಳಲ್ಲಿ ಹೆಚ್ಚು ಮಳೆಯಾಗಿದೆ. ಸಿಕ್ಕಿಂನಲ್ಲಿ ದಾಖಲೆ ಪ್ರಮಾಣದ ಹೆಚ್ಚುವರಿ ಮಳೆಯಾಗಿದೆ. ಅನೇಕ ರಾಜ್ಯಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಉದ್ಭವಿಸಿದೆ.

ಕೇಂದ್ರ ಜಲ ಆಯೋಗದ (ಸಿಡಬ್ಲ್ಯುಸಿ) ಪ್ರಕಾರ, ಆಗಸ್ಟ್ 27ರವರೆಗೆ ದೇಶದ ಜಲಾಶಯಗಳ ಒಟ್ಟಾರೆ ನೀರು ಸಂಗ್ರಹದ ಸ್ಥಿತಿ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಉತ್ತಮವಾಗಿದೆ. ಕಳೆದ 10 ವರ್ಷಗಳ ಸರಾಸರಿ ಸಂಗ್ರಹಕ್ಕಿಂತಲೂ ಈ ವರ್ಷ ಉತ್ತಮವಾಗಿದೆ.

ಗಂಗಾ, ನರ್ಮದಾ, ಗೋದಾವರಿ, ಕೃಷ್ಣಾ, ಕಾವೇರಿ ಸೇರಿದಂತೆ ಪ್ರಮುಖ ನದಿಗಳ ಜಲಾಶಯಗಳ ನೀರು ಸಂಗ್ರಹದ ಸ್ಥಿತಿಯು ಉತ್ತಮವಾಗಿದೆ ಎಂದು ಕೇಂದ್ರ ಜಲ ಆಯೋಗ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT