ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಕೋವಿಡ್ ಪಾಸಿಟಿವಿಟಿ ದರ ಶೇ 5ಕ್ಕಿಂತ ಹೆಚ್ಚಾದರೆ ಲಾಕ್‌ಡೌನ್: ದೆಹಲಿ ಆರೋಗ್ಯ ಸಚಿವ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್ ಮೂರನೇ ಅಲೆಯನ್ನು ಎದುರಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ. ಆದರೆ, ಪಾಸಿಟಿವಿಟಿ ದರ ಶೇ 5ಕ್ಕಿಂತ ಹೆಚ್ಚಾದರೆ ತಕ್ಷಣವೇ ಲಾಕ್‌ಡೌನ್ ಘೋಷಿಸಲಾಗುವುದು ಎಂದು ನವದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಹೇಳಿದ್ದಾರೆ.

ಸಂಭಾವ್ಯ ಮೂರನೇ ಅಲೆಯನ್ನು ಗಮನದಲ್ಲಿಟ್ಟುಕೊಂಡು ಕೋವಿಡ್ ಸೋಂಕಿತರಿಗಾಗಿ 37,000 ಹಾಸಿಗೆಗಳನ್ನು ಸಜ್ಜುಗೊಳಿಸಲಾಗುತ್ತಿದೆ.

ಓದಿ: 

ಒಂದು ವೇಳೆ ಮೂರನೇ ಅಲೆಯು ತೀರಾ ಕೆಟ್ಟ ಪರಿಸ್ಥಿತಿ ಉಂಟುಮಾಡಿದರೆ ಅದನ್ನು ಎದುರಿಸಲು ಬೇಕಾದ ಎಲ್ಲ ಸಿದ್ಧತೆಯನ್ನೂ ಸರ್ಕಾರ ಮಾಡಿಕೊಂಡಿದೆ ಎಂದು ವಾಣಿಜ್ಯೋದ್ಯಮ ಮಹಾಸಂಘದ (ಅಸೋಚಾಂ) ವರ್ಚುವಲ್ ಸಭೆಯಲ್ಲಿ ಜೈನ್ ಹೇಳಿದ್ದಾರೆ.

ಎರಡನೇ ಅಲೆಯ ಸಂದರ್ಭದ ಅನುಭವಗಳಿಂದ ದೆಹಲಿ ನಗರಾಡಳಿತವು ಪಾಠ ಕಲಿತಿದೆ. ಹೆಚ್ಚು ಆಮ್ಲಜನಕ ಘಟಕಗಳು, ಐಸಿಯು ಬೆಡ್‌ಗಳನ್ನು ಸಿದ್ಧಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ಉಲ್ಲೇಖಿಸಿ ಅವರು ತಿಳಿಸಿದ್ದಾರೆ.

ಗುರುವಾರ ದೆಹಲಿಯಲ್ಲಿ 61 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಪಾಸಿಟಿವಿಟಿ ದರ ಶೇ 0.08ರಷ್ಟಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು