ನವದೆಹಲಿ: ಕರ್ನಾಟಕದ ಬಿಜೆಪಿ ಸರ್ಕಾರವು ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿ ಮಾಡಿ ಒಳಮೀಸಲಾತಿ ನೀಡಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಷಿ ತಿಳಿಸಿದರು.
ಬುಧವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಮುಸ್ಲಿಮರಿಗೆ ಮೀಸಲಾತಿ ನೀಡಿದ್ದು ಸಂವಿಧಾನ ವಿರೋಧಿ ಆಗಿತ್ತು. ಧರ್ಮದ ಆಧಾರದಲ್ಲಿ ಮೀಸಲಾತಿ ಕೊಡಲು ಆಗದು ಎಂದು ಸುಪ್ರೀಂ ಕೋರ್ಟ್ ಸಹ ತಿಳಿಸಿತ್ತು. ಹಾಗಾಗಿ, ಆ ಮೀಸಲಾತಿ ತೆಗೆಯಲಾಗಿದೆ’ ಎಂದರು.
‘ಕಾಂಗ್ರೆಸ್ ಹಾಗೂ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡು ಈ ಹಿಂದಿನಿಂದಲೂ ಚುನಾವಣೆ ಎದುರಿಸುತ್ತಿವೆ. ಬಿಜೆಪಿ ಯಾವುದೇ ಪಕ್ಷದ ಜತೆಗೆ ಒಳ ಒಪ್ಪಂದ ಮಾಡಿಕೊಳ್ಳುವುದಿಲ್ಲ. ಈ ಸಲ ಅತಂತ್ರ ವಿಧಾನಸಭೆ ಸೃಷ್ಟಿಯಾಗುವುದಿಲ್ಲ. ಬಿಜೆಪಿಗೆ ಸಂಪೂರ್ಣ ಬಹುಮತ ಸಿಗಲಿದೆ’ ಎಂದೂ ಅವರು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.