ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಮ್ರಾನ್‌ ಖಾನ್‌ಗೆ ಮಾ.3ರ ವರೆಗೆ ರಕ್ಷಣಾ ಜಾಮೀನು

Last Updated 21 ಫೆಬ್ರುವರಿ 2023, 13:44 IST
ಅಕ್ಷರ ಗಾತ್ರ

ಲಾಹೋರ್‌ (ಪಿಟಿಐ): ಪಾಕಿಸ್ತಾನದ ಚುನಾವಣಾ ಆಯೋಗ ಎದುರು ನಡೆದ ಹಿಂಸಾತ್ಮಕ ಪ್ರತಿಭಟನೆ ಪ್ರಕರಣದ ವಿಚಾರಣೆಗೆ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಇಲ್ಲಿನ ಹೈಕೋರ್ಟ್‌ ಎದುರು ಸೋಮವಾರ ಹಾಜರಾಗಿದ್ದು, ನ್ಯಾಯಾಲಯ ಮಾ.3ರ ವರೆಗೆ ರಕ್ಷಣಾ ಜಾಮೀನು ಮಂಜೂರು ಮಾಡಿದೆ.

ಈ ವೇಳೆ ಕೋರ್ಟ್‌ ಆವರಣದಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾಗಿ ಇಮ್ರಾನ್ ಖಾನ್‌ ಪರ ಬೆಂಬಲ ಪ್ರದರ್ಶಿಸಿದರು.

ಕಳೆದ ವರ್ಷ ಇಮ್ರಾನ್‌ ಖಾನ್‌ ಅವರನ್ನು ಅನರ್ಹಗೊಳಿಸಿದ ಹಿನ್ನೆಲೆಯಲ್ಲಿ ಪಾಕಿಸ್ತಾನ ತೆಹ್ರೀಕ್‌ ಇ–ಇನ್ಸಾಫ್ (ಪಿಟಿಐ) ಕಾರ್ಯಕರ್ತರು ಚುನಾವಣಾ ಆಯೋಗದ ಎದುರು ಪ್ರತಿಭಟಿಸಿದ್ದರು. ಈ ಸಂಬಂಧ ಪೊಲೀಸರು ಭಯೋತ್ಪಾದನೆ ವಿರೋಧಿ ಕಾನೂನಿನಡಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆಗೆ ಖುದ್ದು ಹಾಜರಾಗುವಂತೆ ನ್ಯಾಯಮೂರ್ತಿ ತಾರಿಕ್‌ ಸಲೀಮ್ ಶೇಖ್‌ ಅವರು ನಿರ್ದೇಶನ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT