ಶನಿವಾರ, ಏಪ್ರಿಲ್ 1, 2023
23 °C

ಮುಂಬೈನಲ್ಲಿ‌ ನಿರ್ಭಯಾ ಪ್ರಕರಣದಂತೆಯೇ, ಅತ್ಯಾಚಾರಿಗಳಿಂದ ಕ್ರೌರ್ಯ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ದೆಹಲಿಯ ನಿರ್ಭಯಾ ಪ್ರಕರಣದಂತೆ ಮುಂಬೈನಲ್ಲೂ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಕ್ರೌರ್ಯವೆಸಗಲಾಗಿದೆ. 

ಮುಂಬೈನ ಸಾಕಿ ನಾಕಾ ಪ್ರದೇಶದಲ್ಲಿ 35 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ದುಷ್ಕರ್ಮಿಗಳು, ಖಾಸಗಿ ಭಾಗಕ್ಕೆ ರಾಡ್ ಹಾಕಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಈ ಕುರಿತು 'ಇಂಡಿಯಾ ಟುಡೇ' ವರದಿ ಮಾಡಿದೆ.  

ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. 

ಘಟನೆ ಸಂಬಂಧ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಮತ್ತಷ್ಟು ದುಷ್ಕರ್ಮಿಗಳು ಭಾಗಿಯಾಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. 

ಮುಂಬೈನ ಸಾಕಿ ನಾಕಾ ಪ್ರದೇಶದ ಕೈರಾನಿ ರಸ್ತೆಯಲ್ಲಿ ಘಟನೆ ನಡೆದಿದೆ. ಡಿಸಿಪಿ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತರು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ತನಿಖೆ ಪ್ರಗತಿಯಲ್ಲಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು