ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾತಂತ್ರ್ಯ ದಿನದ ಭದ್ರತೆ: ಮೊದಲ ಸಲ ಸಿಆರ್‌ಪಿಎಫ್‌ ಮಹಿಳಾ ಸಿಬ್ಬಂದಿಗೆ ಹೊಣೆ

ಶ್ರೀನಗರದ ಸಮಾರಂಭ | ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿ ನಿಯೋಜನೆ
Last Updated 15 ಆಗಸ್ಟ್ 2020, 12:18 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲಾಲ್‌ ಚೌಕ್‌ ಮತ್ತು ಇತರೆ ಪ್ರದೇಶಗಳಲ್ಲಿ ಸ್ವಾತಂತ್ರ್ಯ ದಿನದ ಭದ್ರತೆಗೆ ಇದೇ ಮೊದಲ ಬಾರಿಗೆ ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯ(ಸಿಆರ್‌ಪಿಎಫ್‌) ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಕೋತಿಭಾಗ್‌ ಪೊಲೀಸ್‌ ಠಾಣೆ ಪ್ರದೇಶದ ಲಾಲ್‌ಚೌಕ್‌ ಸೇರಿದಂತೆ ಪ್ರಮುಖ ವಾಣಿಜ್ಯ ಪ್ರದೇಶದಲ್ಲಿಅರೆಸೇನಾಪಡೆಯ ಈ ಸಿಬ್ಬಂದಿ ಕಾರ್ಯನಿರ್ವಹಿಸಿದರು. ‘ನಾವು ಸಿಆರ್‌ಪಿಎಫ್‌ನ 232ನೇ ಬೆಟಾಲಿಯನ್‌ನ ಸಿಬ್ಬಂದಿ. ಈ ಹಿಂದೆಯೂ ಹಲವು ಬಾರಿ ಕಾನೂನು ಸುವ್ಯವಸ್ಥೆ ಹಾಗೂ ಭದ್ರತೆಯ ಕೆಲಸಗಳಿಗೆ ನಮ್ಮನ್ನು ನಿಯೋಜಿಸಲಾಗಿತ್ತು. ಹೀಗಾಗಿ ಇದು ಹೊಸದೇನಲ್ಲ’ ಎಂದು ಮಹಿಳಾ ಕಾನ್‌ಸ್ಟೆಬಲ್‌ ಒಬ್ಬರು ಹೇಳಿದರು.

‘ಪುರುಷರಂತೆಯೇ ನಮಗೂ ಕಠಿಣವಾದ ತರಬೇತಿ ಇರುತ್ತದೆ. ಹೀಗಾಗಿ ನಾವು ಅವರು ಬೇರೆ ಅಲ್ಲ’ ಎಂದು ಅವರು ಹೇಳಿದರು. ಅಮರನಾಥ ಯಾತ್ರೆಯ ಹಿನ್ನೆಲೆಯಲ್ಲಿ ಸಿಆರ್‌ಪಿಎಫ್‌ ಮಹಿಳಾ ಸಿಬ್ಬಂದಿಯನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ನಿಯೋಜಿಸಲಾಗಿತ್ತು. ಆದರೆ, ಕೋವಿಡ್‌–19 ಪಿಡುಗಿನ ಕಾರಣ ಯಾತ್ರೆಯೇ ರದ್ದಾಗಿತ್ತು. ಶುಕ್ರವಾರ ನೌಗಮ್‌ ಪ್ರದೇಶದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ಪೊಲೀಸ್‌ ಅಧಿಕಾರಿಗಳು ಮೃತಪಟ್ಟ ಕಾರಣ ಸ್ವಾತಂತ್ರ್ಯ ದಿನದ ಅಂಗವಾಗಿ ಕಣಿವೆ ರಾಜ್ಯದಲ್ಲಿ ಶನಿವಾರ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT