ಶುಕ್ರವಾರ, ಆಗಸ್ಟ್ 12, 2022
26 °C

1973ರಲ್ಲಿ ಸಂಸತ್ತಿಗೆ ಎತ್ತಿನ ಗಾಡಿಯಲ್ಲಿ ಸಾಗಿದ ವಾಜಪೇಯಿ;ವಿಪಕ್ಷಗಳ ತಿರುಗುಬಾಣ!

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ₹100 ದಾಟಿದೆ. ಇಂಧನ ಬೆಲೆ ಏರಿಕೆ ವಿರುದ್ಧ ವಿರೋಧ ಪಕ್ಷಗಳು ಧ್ವನಿ ಎತ್ತುತ್ತಲೇ ಇವೆ.

ಇದಕ್ಕೊಂದು ಹೊಸ ಸೇರ್ಪಡೆಯೆಂಬಂತೆ 1973ನೇ ಇಸವಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸಿದ್ದ ವಿಡಿಯೊ ತುಣುಕನ್ನು ಕಾಂಗ್ರೆಸ್ ಹಂಚಿಕೊಂಡಿದೆ.

ಇದನ್ನೂ ಓದಿ:  

ಕಾಂಗ್ರೆಸ್ ಸಂಸದ ಶಶಿ ತರೂರ್ ಹಂಚಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಪ್ರಧಾನಿ ಇಂದಿರಾ ಗಾಂಧಿ, ಪೆಟ್ರೋಲ್‌ಗೆ ಏಳು ಪೈಸೆ ಬೆಲೆ ಏರಿಕೆ ಮಾಡಿದ್ದಾಗ ಜನ ಸಂಘ ಪಕ್ಷದ ನಾಯಕ ಅಟಲ್ ಬಿಹಾರಿ ಪಾಜಪೇಯಿ, ಪ್ರತಿಭಟನೆಯ ಸೂಚಕವಾಗಿ ಎತ್ತಿನ ಗಾಡಿಯಲ್ಲಿ ಸಾಗುವ ಮೂಲಕ ಸಂಸತ್ ಭವನಕ್ಕೆ ಆಗಮಿಸಿದ್ದರು. ವಾಜಪೇಯಿ ಅವರನ್ನು ಬೆಂಬಲಿಗರು ಘೋಷಣೆ ಕೂಗುತ್ತಾ ಬೆಂಬಲಿಸಿದ್ದರು.

 

 

 

ಇದನ್ನೇ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ತಿರುಗುಬಾಣವಾಗಿ ಪ್ರಯೋಗಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಶಶಿ ತರೂರ್, 1973ರಲ್ಲಿ ಪೆಟ್ರೋಲ್ ಬೆಲೆಯನ್ನು ಏಳು ಪೈಸೆ ಏರಿಸಿದಾಗ ವಿರೋಧ ಪಕ್ಷ ನಡೆಸಿದ ಪ್ರತಿಭಟನೆಯ ಅಪರೂಪದ ವಿಡಿಯೊ ತುಣುಕು ಇದಾಗಿದೆ. ಅಟಲ್ ಬಿಹಾರಿ ವಾಜಪೇಯಿ ಅವರು ಎತ್ತಿನ ಗಾಡಿಯ ಮೂಲಕ ಸಂಸತ್ತಿಗೆ ಆಗಮಿಸಿದ್ದರು. ಇಂದು ಭದ್ರತಾ ನಿಬಂಧನೆಗಳು ಇರುವುದರಿಂದ ಇದು ಸಾಧ್ಯವಿಲ್ಲ ಎಂದಿದ್ದಾರೆ.

 

ತೃಣಮೂಲ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ನಾಯಕರು ಇದೇ ವಿಡಿಯೊವನ್ನು ಹಂಚುವ ಮೂಲಕ ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಪ್ರಯತ್ನ ಮಾಡಿದ್ದಾರೆ.

ತಮಿಳುನಾಡು, ಕೇರಳ, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ₹100 ದಾಟಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು