ಗುರುವಾರ , ಜನವರಿ 28, 2021
15 °C

ದೇಶದಲ್ಲಿ ರೂಪಾಂತರಿ ಕೊರೊನಾ ವೈರಸ್‌ಗಳ ಸಂಖ್ಯೆ 71ಕ್ಕೆ ಏರಿಕೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಬ್ರಿಟನ್‌ನಲ್ಲಿ ಮೊದಲ ಬಾರಿಗೆ ಪತ್ತೆಯಾಗಿರುವ ಕೊರೊನಾ ವೈರಸ್ ರೂಪಾಂತರಿ ಸೋಂಕು ದೇಶದಲ್ಲಿ ಮತ್ತೆ 13 ಮಂದಿಯಲ್ಲಿ ದೃಢಪಟ್ಟಿದೆ.

ಇದರೊಂದಿಗೆ ದೇಶದಲ್ಲಿ ಬ್ರಿಟನ್ ರೂಪಾಂತರಿ ಕೋವಿಡ್-19 ಸೋಂಕಿತರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ.

ಬ್ರಿಟನ್‌ನಲ್ಲಿ ಮೊದಲ ಬಾರಿಗೆ ವರದಿಯಾಗಿರುವ ಹೊಸ ರೂಪಾಂತರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ 71ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಈ ಎಲ್ಲ ಸೋಂಕಿತರವನ್ನು ಆಯಾ ರಾಜ್ಯ ಸರ್ಕಾರಗಳು ಏರ್ಪಡಿಸಿದ ಆರೋಗ್ಯ ಕೇಂದ್ರಗಳಲ್ಲಿ ಪ್ರತ್ಯೇಕವಾಸದಲ್ಲಿ ಇರಿಸಲಾಗಿದೆ.

ಇವರೊಂದಿಗೆ ನಿಕಟ ಸಂಪರ್ಕ ಹೊಂದಿದವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಸಹ ಯಾತ್ರಿಕರು, ಕುಟುಂಬ ಸೇರಿದಂತೆ ಸಂಪರ್ಕದಲ್ಲಿದ್ದವರ ಸಮಗ್ರ ಪತ್ತೆ ಹಚ್ಚುವಿಕೆಯನ್ನು ಆರಂಭಿಸಲಾಗಿದೆ.

ಇದನ್ನೂ ಓದಿ: 

ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಕಣ್ಗಾವಲು, ನಿಯಂತ್ರಣ, ಆರೋಗ್ಯ ತಪಾಸಣೆ ಮತ್ತು ಲ್ಯಾಬ್‌ಗಳಿಗೆ ಸ್ಯಾಂಪಲ್‌ಗಳ ರವಾನೆಗೆ ಸಂಬಂಧಿಸಿದಂತೆ ಸೂಚನೆಗಳನ್ನು ರವಾನಿಸಲಾಗಿದೆ ಎಂದು ತಿಳಿಸಿದೆ.

ಕೊರೊನಾ ವೈರಸ್ ಹೊಸ ರೂಪಾಂತರವನ್ನು ಬ್ರಿಟನ್ ಹೊರತಾಗಿ ಈಗಾಗಲೇ ಡೆನ್ಮಾರ್ಕ್, ಹಾಲೆಂಡ್, ಆಸ್ಟ್ರೇಲಿಯಾ, ಇಟಲಿ, ಸ್ವೀಡನ್, ಫ್ರಾನ್ಸ್, ಸ್ಪೇನ್, ಸ್ವಿಜರ್ಲೆಂಡ್, ಜರ್ಮನಿ, ಕೆನಡಾ, ಜಪಾನ್, ಲೆಬನಾನ್, ಸಿಂಗಾಪುರ ಸೇರಿದಂತೆ ಹಲವಾರು ರಾಷ್ಟ್ರಗಳಲ್ಲಿ ಪತ್ತೆ ಹಚ್ಚಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು