ಮಂಗಳವಾರ, ಮೇ 18, 2021
30 °C

ಕೋವಿಡ್‌ ಪ್ರಕರಣಗಳ ಏರಿಕೆ: ಐಸಿಎಸ್‌ಇ 10, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಾದ್ಯಂತ ಕೋವಿಡ್ ಸೋಂಕು ಪ್ರಕರಣಗಳು ತೀವ್ರವಾಗಿ ಏರಿಕೆಯಾಗುತ್ತಿರುವ ಕಾರಣ ಐಸಿಎಸ್‌ಇ ಹತ್ತನೇ ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಈ ಕುರಿತು ಸಿಐಎಸ್‌ಸಿಇ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಪರಿಷ್ಕೃತ ವೇಳಾಪಟ್ಟಿಯ ಬಗ್ಗೆ ಜೂನ್ 1ರಂದು ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದೆ.

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗದೇ ಇರುವ ಆಯ್ಕೆಯನ್ನೂ ನೀಡಲಾಗುವುದು. ಪರೀಕ್ಷೆಗೆ ಹಾಜರಾಗದೇ ಇರುವ ವಿದ್ಯಾರ್ಥಿಗಳ ಫಲಿತಾಂಶಕ್ಕಾಗಿ ವಸ್ತುನಿಷ್ಠ ಮಾನದಂಡವೊಂದನ್ನು ಸಿದ್ಧಪಡಿಸಲಾಗುವುದು ಎಂದೂ ಪ್ರಕಟಣೆ ತಿಳಿಸಿದೆ.

ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್‌ಇ) ಸಹ ಈಗಾಗಲೇ ಹತ್ತನೇ ತರಗತಿಯ ಪರೀಕ್ಷೆಯನ್ನು ರದ್ದು ಮಾಡಿದ್ದು, 12ನೇ ತರಗತಿ ಪರೀಕ್ಷೆಯನ್ನು ಮುಂದೂಡಿದೆ.

ಓದಿ: ಕೋವಿಡ್‌: ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ ರದ್ದು

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು