ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಶಾಸಕಿಗೆ ಜೀವ ಬೆದರಿಕೆ ಕರೆ

Last Updated 22 ನವೆಂಬರ್ 2020, 15:57 IST
ಅಕ್ಷರ ಗಾತ್ರ

ಪಟ್ನಾ: ನರ್‌ಕಟಿಯಾಗಂಜ್ ಕ್ಷೇತ್ರದ ಬಿಜೆಪಿ ಶಾಸಕಿ ರಶ್ಮಿ ವರ್ಮಾ ಅವರಿಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ ₹ 25 ಲಕ್ಷಕ್ಕೆ ಬೇಡಿಕೆ ಇರಿಸಿದ್ದು, ಹಣ ನೀಡದಿದ್ದರೆ ಸಾಯಲು ತಯಾರಾಗಿರುವಂತೆ ಜೀವಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಬಿಜೆಪಿ ಶಾಸಕಿ ಗೋರಖ್‌ಪುರದಿಂದ ಪಟ್ನಾಕ್ಕೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ಬೆದರಿಕೆ ಕರೆ ಬಂದಿದೆ. ರಶ್ಮಿ ಅವರ ವ್ಯವಸ್ಥಾಪಕ ಮಥುರಾ ಸಿಂಗ್ ಅವರು ಪೊಲೀಸರಿಗೆ ದೂರು ನೀಡಿದ್ದು, 9693763137 ಈ ಸಂಖ್ಯೆಯಿಂದ ಕರೆ ಬಂದಿರುವುದಾಗಿ ತಿಳಿಸಿದ್ದಾರೆ.

‘ಪ್ರಕರಣ ಸಂಬಂಧ ಎಫ್‌ಐಆರ್‌ ದಾಖಲಾಗಿದೆ. ಶಾಸಕಿ ಮತ್ತು ಆರೋಪಿಯ ದೂರವಾಣಿ ಸಂಭಾಷಣೆಯ ರೆಕಾರ್ಡ್ ದೊರಕಿದೆ. ತನಿಖೆ ನಡೆಸಲಾಗುತ್ತಿದೆ’ ಎಂದು ಡಿಎಸ್‌ಪಿ ಕುಂದನ್ ಕುಮಾರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT