ಶನಿವಾರ, ಜನವರಿ 23, 2021
28 °C

ಮುಂದಿನ ಕೆಲವೇ ದಿನಗಳಲ್ಲಿ ಲಸಿಕೆ ವಿತರಣೆ: ಹರ್ಷವರ್ಧನ್

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಚೆನ್ನೈ (ತಮಿಳುನಾಡು): ಮುಂದಿನ ಕೆಲವು ದಿನಗಳಲ್ಲಿ ದೇಶವಾಸಿಗಳಿಗೆ  ಕೋವಿಡ್-19 ಲಸಿಕೆಯನ್ನು ವಿತರಿಸಲು ಸಾಧ್ಯವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.

ಎರಡನೇ ಹಂತದ ಲಸಿಕೆ ವಿತರಣೆ ತಾಲೀಮು (ಡ್ರೈ ರನ್) ಶುಕ್ರವಾರ ನಡೆಯುತ್ತಿದ್ದು, ಈ ಮಧ್ಯೆ ತಮಿಳುನಾಡಿಗೆ ಭೇಟಿ ನೀಡಿರುವ ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.

ಅತ್ಯಂತ ಕಡಿಮೆ ಅವಧಿಯಲ್ಲಿ ಕೋವಿಡ್-19 ಲಸಿಕೆ ಅಭಿವೃದ್ಧಿಪಡಿಸುವ ಮೂಲಕ ಭಾರತವು ಉತ್ತಮ ಸಾಧನೆ ಮಾಡಿದೆ. ಮುಂದಿನ ಕೆಲವು ದಿನಗಳಲ್ಲಿ ನಾವು ಈ ಲಸಿಕೆಗಳನ್ನು ದೇಶವಾಸಿಗಳಿಗೆ ನೀಡಲು ಸಾಧ್ಯವಾಗುತ್ತದೆ. ಇದನ್ನು ಮೊದಲು ನಮ್ಮ ಆರೋಗ್ಯ ಸಿಬ್ಬಂದಿಗಳಿಗೆ ಹಾಗೂ ಮುಂಚೂಣಿಯ ಸೇನಾನಿಗಳಿಗೆ ನೀಡಲಿದ್ದೇವೆ ಎಂದು ಹರ್ಷವರ್ಧನ್ ತಿಳಿಸಿದರು.

ಜನವರಿ 2ರಂದು ನಾವು ಸುಮಾರು 125 ಜಿಲ್ಲೆಗಳಲ್ಲಿ ಡ್ರೈ ರನ್ ಹಮ್ಮಿಕೊಂಡಿದ್ದೆವು. ಇಂದು (ಶುಕ್ರವಾರ) ನಾವಿದನ್ನು ಮೊದಲು ಮಾಡಿದ ಮೂರು ರಾಜ್ಯಗಳನ್ನು ಹೊರತುಪಡಿಸಿ ದೇಶದ್ಯಾಂತ ಕೈಗೊಳ್ಳುತ್ತಿದ್ದೇವೆ ಎಂದರು.

ಇದನ್ನೂ ಓದಿ: 

ಕೋವಿಡ್-19 ಲಸಿಕೆ ಹಂಚಿಕೆ ಸುಗಮವಾಗಿ ಸಾಗಲು ಮತ್ತು ಅಗತ್ಯ ಬೇಡಿಕೆದಾರರಿಗೆ ತಲುಪಲು ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುವ ಎನ್‌ಜಿಒಗಳ ಸಹಾಯಕ್ಕೆ ವಿನಂತಿ ಮಾಡಲಾಗಿದೆ ಎಂದವರು ತಿಳಿಸಿದರು.

ಶುಕ್ರವಾರದಂದು ದೇಶದ 33 ರಾಜ್ಯಗಳ 736 ಜಿಲ್ಲೆಗಳಲ್ಲಿ ಕೋವಿಡ್-19 ಲಸಿಕೆ ಹಂಚಿಕೆ ತಾಲೀಮು ಹಮ್ಮಿಕೊಳ್ಳಲಾಗಿದೆ. ಇದರಂತೆ ತಮಿಳುನಾಡಿನ ರಾಜೀವ್ ಗಾಂಧಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪೂರ್ವಾಭ್ಯಾಸವನ್ನು ಪರಿಶೀಲಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು