ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನದ ಕೆಲವು ಭಾಗಗಳಲ್ಲಿ ನಿರಂತರ ಮಳೆ, ಪ್ರವಾಹ

Last Updated 4 ಆಗಸ್ಟ್ 2021, 7:36 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನದ ಹದೌತಿ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ನೂರಕ್ಕೂ ಹೆಚ್ಚು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ.

‘ಭಾರಿ ಮಳೆಯಿಂದಾಗಿ ಕೋಟ, ಬಾರನ್, ಬಂಡಿ ಮತ್ತು ಜಲಾವರದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ಆಡಳಿತಕ್ಕೆ ಸೂಚನೆಗಳನ್ನು ನೀಡಲಾಗಿದೆ‘ ಎಂದು ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್ ಬುಧವಾರ ಟ್ವೀಟ್ ಮಾಡಿದ್ದಾರೆ.

ರಾಷ್ಟ್ರೀಯ ವಿಪತ್ತು ಕಾರ್ಯಾಚರಣೆ ಪಡೆಯವರು ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ನಡೆಸುತ್ತಿದ್ದಾರೆ. ಅಗತ್ಯವಿದ್ದರೆ, ಭಾರತೀಯ ಸೇನೆಯ ಸಹಾಯವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಧೋಲ್ಪುರದಲ್ಲಿ ಚಂಬಲ್ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಭರತಪುರದಲ್ಲಿ ಭಾರಿ ಮಳೆಯಿಂದಾಗಿ ಕೆಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ಈ ಜಿಲ್ಲೆಗಳಲ್ಲಿ ರಕ್ಷಣಾ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT