ಕೆಂಪುಕೋಟೆಯಲ್ಲಿ ನಡೆದ ಘಟನೆ ವಿಷಾದಕರ: ಆರ್ಎಸ್ಎಸ್

ನವದೆಹಲಿ: ಟ್ರ್ಯಾಕ್ಟರ್ ರ್ಯಾಲಿಯ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಖಂಡನೆ ವ್ಯಕ್ತಪಡಿಸಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘವು(ಆರ್ಎಸ್ಎಸ್), ಕೆಂಪುಕೋಟೆಯಲ್ಲಿ ನಡೆದ ‘ದುರದೃಷ್ಟಕರ ವರ್ತನೆಯು’, ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವವನ್ನೇ ಅರ್ಪಿಸಿದವರಿಗೆ ಮಾಡಿದ ಅವಮಾನ ಎಂದು ಟೀಕಿಸಿದೆ.
‘ಪವಿತ್ರವಾದ ಗಣರಾಜ್ಯೋತ್ಸವ ದಿನದಂದು, ದೆಹಲಿಯಲ್ಲಿ ನಡೆದ ಹಿಂಸೆ ಹಾಗೂ ಘರ್ಷಣೆ ವಿಷಾದನೀಯ’ ಎಂದು ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ಸುರೇಶ್ ಭೈಯಾಜಿ ಪ್ರಕಟಣೆಯಲ್ಲಿ ಹೇಳಿದ್ದಾರೆ. ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜದ ಬದಲಾಗಿ ಅನ್ಯ ಧ್ವಜವನ್ನು ಹಾರಿಸುವುದು ದುರದೃಷ್ಟಕರ ವರ್ತನೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ದೇಶದ ಎಲ್ಲ ಜನರೂ ರಾಜಕೀಯ ಹಾಗೂ ಸೈದ್ಧಾಂತಿಕ ಭಿನ್ನಾಭಿಪ್ರಾಯದಿಂದ ಹೊರಬಂದು, ಶಾಂತಿಗೆ ಆದ್ಯತೆ ನೀಡಬೇಕು ಎಂದು ಆರ್ಎಸ್ಎಸ್ ಹೇಳಿದೆ.
ಇವುಗಳನ್ನೂ ಓದಿ
ಹಿಂಸಾಚಾರ ನಡೆಸಿದ್ದು ಯಾರು? ಸಾಮಾಜಿಕ ತಾಣಗಳಲ್ಲಿ ಚರ್ಚೆ
ಚಳವಳಿ ಕೆಡಿಸಲು ಸಮಾಜಘಾತುಕರ ಪಿತೂರಿ: ರೈತ ಸಂಘಟನೆಗಳ ಆಕ್ರೋಶ
ದೆಹಲಿ ಹಿಂಸಾಚಾರ| ವಿರೋಧ ಪಕ್ಷಗಳಲ್ಲಿ ತಳಮಳ
ಕೆಂಪು ಕೋಟೆ: ಪೊಲೀಸರನ್ನು ಇಕ್ಕಟ್ಟಿಗೆ ಸಿಲುಕಿಸಿ ಪ್ರತಿಭಟನಾಕಾರರ ಲಾಠಿ ಪ್ರಹಾರ!
ದೆಹಲಿ ಹಿಂಸಾಚಾರದಲ್ಲಿ 86 ಪೊಲೀಸ್ ಸಿಬ್ಬಂದಿಗೆ ಗಾಯ
ಟ್ರ್ಯಾಕ್ಟರ್ ಮಗುಚಿ ಒಬ್ಬ ರೈತ ಸಾವು; ದೆಹಲಿಯ ಹಲವೆಡೆ ಇಂಟರ್ನೆಟ್ ಸ್ಥಗಿತ
ದೆಹಲಿ ಕೆಂಪುಕೋಟೆ ಪ್ರವೇಶಿಸಿದ ರೈತರು, ಕೋಟೆ ಮೇಲೆ ಧ್ವಜಾರೋಹಣ
Video: ಬೆಂಗಳೂರಿನತ್ತ ನೂರಾರು ಟ್ರಾಕ್ಟರ್ನಲ್ಲಿ ಆಗಮಿಸುತ್ತಿರುವ ರೈತರು
Photos: ದೆಹಲಿಯಲ್ಲಿ ತೀವ್ರ ಸ್ವರೂಪ ಪಡೆದ ರೈತರ ಪ್ರತಿಭಟನೆ
ಚಿತ್ರಗಳಲ್ಲಿ ನೋಡಿ: ದೆಹಲಿಯಲ್ಲಿ ತೀವ್ರ ಸ್ವರೂಪ ಪಡೆದ ರೈತರ ಪ್ರತಿಭಟನೆ...
VIDEO: ಬೆಂಗಳೂರಲ್ಲಿ ನೃತ್ಯ ಮಾಡಿ ರೈತರ ಪ್ರತಿಭಟನೆ
ಸಿಂಘು, ಟಿಕ್ರಿ ಗಡಿಯಲ್ಲಿ ಬ್ಯಾರಿಕೇಡ್ ಮುರಿದ ಪ್ರತಿಭಟನಾನಿರತ ರೈತರು
ಟ್ರ್ಯಾಕ್ಟರ್ ರ್ಯಾಲಿ| ಕೆಂಪುಕೋಟೆಗೆ ರೈತರ ಲಗ್ಗೆ: ಹಿಂಸೆಗೆ ತಿರುಗಿದ ಹೋರಾಟ
ಕಲಬುರ್ಗಿಯಲ್ಲಿ 300ಕ್ಕೂ ಹೆಚ್ಚು ಟ್ರ್ಯಾಕ್ಟರ್ ರ್ಯಾಲಿ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.