ತೆರಿಗೆ ವಂಚನೆ: ಜೀ ಸಮೂಹದ ಕಚೇರಿಗಳ ಮೇಲೆ ಐಟಿ ದಾಳಿ

ಮುಂಬೈ: ‘ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಜೀ ಮಾಧ್ಯಮ ಸಮೂಹದ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆಯ (ಐಟಿ) ಅಧಿಕಾರಿಗಳು ಸೋಮವಾರ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ’ ಎಂದು ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
‘ಮುಂಬೈ ಹಾಗೂ ನವದೆಹಲಿಯಲ್ಲಿರುವ ಎಲ್ಲಾ ಕಚೇರಿಗಳ ಮೇಲೆ ಏಕ ಕಾಲದಲ್ಲೇ ದಾಳಿ ನಡೆಸಲಾಗಿದೆ’ ಎಂದೂ ಅವರು ನುಡಿದಿದ್ದಾರೆ.
‘ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ನಮ್ಮ ಕಚೇರಿಗಳಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ನಮ್ಮ ಅಧಿಕಾರಿಗಳು ಅವರಿಗೆ ಅಗತ್ಯ ಮಾಹಿತಿಗಳನ್ನೂ ಒದಗಿಸಿದ್ದಾರೆ. ಅವರಿಗೆ ಸಂಪೂರ್ಣ ಸಹಕಾರವನ್ನೂ ನೀಡಿದ್ದಾರೆ’ ಎಂದು ಜೀ ಸಮೂಹದ ವಕ್ತಾರರ ಪ್ರಕಟಣೆ ತಿಳಿಸಿದೆ.
ರಾಜ್ಯಸಭಾ ಸದಸ್ಯ ಸುಭಾಷ್ ಚಂದ್ರ ಅವರು ಜೀ ಸಮೂಹದ ಸಂಸ್ಥಾಪಕರಾಗಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.