ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂಗಾರು ಬಿತ್ತನೆ ಪ್ರದೇಶ ಹೆಚ್ಚಳ: ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್

Last Updated 26 ನವೆಂಬರ್ 2022, 17:02 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಅನುಕೂಲಕರ ವಾತಾವರಣ ಮತ್ತು ಬಿತ್ತನೆ ಪ್ರದೇಶದಲ್ಲಿ ಏರಿಕೆ ಆಗಿರುವುದರಿಂದ ಪ್ರಸಕ್ತ ಹಿಂಗಾರು ಅವಧಿಯಲ್ಲಿ ಆಹಾರ ಧಾನ್ಯಗಳ ಉತ್ಪಾದನೆಯು ಉತ್ತಮವಾಗಿರುವ ನಿರೀಕ್ಷೆ ಮಾಡಲಾಗಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಶನಿವಾರ ಹೇಳಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿಯ ಹಿಂಗಾರು ಅವಧಿಯಲ್ಲಿ ಈವರೆಗೆ 24.13 ಲಕ್ಷ ಹೆಕ್ಟೇರ್‌ನಷ್ಟು ಹೆಚ್ಚು ಪ್ರದೇಶದಲ್ಲಿ ಬಿತ್ತನೆ ಆಗಿದೆ ಎಂದು ತಿಳಿಸಿದರು.

ನವೆಂಬರ್‌ 25ರವರೆಗಿನ ಮಾಹಿತಿಯ ಪ್ರಕಾರ, 358.59 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಹಿಂಗಾರು ಅವಧಿಯ ಆಹಾರಧಾನ್ಯಗಳ ಬಿತ್ತನೆ ಕಾರ್ಯ ನಡೆದಿದೆ. ಕಳೆದ ವರ್ಷ 334.46 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಕಾರ್ಯ ನಡೆದಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ 24.13 ಲಕ್ಷ ಹೆಕ್ಟೇರ್‌ ಹೆಚ್ಚುವರಿ ಪ್ರದೇಶದಲ್ಲಿ ಬಿತ್ತನೆ ಆಗಿದೆ.

ಹಿಂಗಾರು ಹಂಗಾಮಿನ ಬೆಳೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ತೋಮರ್ ಅವರು ಶನಿವಾರ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಗೋಧಿ ಬಿತ್ತನೆ ಪ್ರದೇಶವು 138.35 ಲಕ್ಷ ಹೆಕ್ಟೇರ್‌ಗಳಿಂದ 152.88 ಲಕ್ಷ ಹೆಕ್ಟೇರ್‌ಗೆ ಏರಿಕೆ ಆಗಿದೆ. ಕಳೆದ ನಾಲ್ಕು ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಗರಿಷ್ಠ ಪ್ರದೇಶದಲ್ಲಿ ಬಿತ್ತನೆ ಆಗಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ. ಮಧ್ಯಪ್ರದೇಶ, ರಾಜಸ್ಥಾನ, ಪಂಜಾಬ್‌, ಬಿಹಾರ, ಗುಜರಾತ್‌, ಜಮ್ಮು–ಕಾಶ್ಮೀರ ಮತ್ತು ಉತ್ತರ ಪ್ರದೇಶದಲ್ಲಿ ಹೆಚ್ಚಿನ ಪ್ರದೇಶದಲ್ಲಿ ಗೋಧಿ ಬಿತ್ತನೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT