ಬೆಂಗಳೂರು: ಎಲ್ಲ ಸಮುದಾಯಗಳಲ್ಲಿ ಇರುವ ಹಿಂದುಳಿದ ಮತ್ತು ಬಡ ಜನರಿಗೆ ಮೀಸಲಾತಿ ಸೌಲಭ್ಯ ದೊರೆಯಬೇಕಿದೆ. ಅದಕ್ಕೆ ಪೂರಕವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಳೆ ಹೇಳಿದರು.

ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಮೀಸಲಾತಿಯ ಪ್ರಮಾಣ ಶೇಕಡ 50ರಷ್ಟನ್ನು ಮೀರಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ, ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸಲು ಮೀಸಲಾತಿ ಹೆಚ್ಚಿಸಲೇಬೇಕಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ನಡೆಸಲಾಗಿದೆ' ಎಂದರು.

ಯಾವುದೇ ಸಮುದಾಯದ ಬಡವರು, ಹಿಂದುಳಿದವರು ಮಾತ್ರ ಮೀಸಲಾತಿ ಸೌಲಭ್ಯ ಪಡೆಯಬೇಕು. ಆದರೆ, ಅನರ್ಹರೇ ಮೀಸಲಾತಿ ಪಡೆಯುತ್ತಿರುವುದು ಹೆಚ್ಚುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಆರ್ಥಿಕವಾಗಿ ಸಶಕ್ತರಾಗಿ ಇರುವವರೇ ಪಡೆಯುತ್ತಿದ್ದಾರೆ. ಅದನ್ನು ತಪ್ಪಿಸಲು ಕ್ರಮದ ಅಗತ್ಯವಿದೆ ಎಂದರು.

ದೇಶದಾದ್ಯಂತ ಜಾತಿವಾರು ಜನಗಣತಿ ನಡೆಸಬೇಕಿದೆ. ಅದರಿಂದ ಆಯಾ ಸಮುದಾಯಗಳ ಜನರಿಗೆ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ನ್ಯಾಯ ದೊರಕಿಸಲು ಸಾಧ್ಯವಾಗುತ್ತದೆ ಎಂದು ಅಠಾವಳೆ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.