ಮನೆಯಲ್ಲೇ ಧ್ವಜಾರೋಹಣ ಮಾಡಿದ ಗೃಹ ಸಚಿವ ಅಮಿತ್ ಶಾ
ನವದೆಹಲಿ: ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿ ಪ್ರತ್ಯೇಕ ವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಮನೆಯಲ್ಲೇ ಧ್ವಜಾರೋಹಣ ಮಾಡಿ ಸ್ವಾತಂತ್ರ್ಯೋತ್ಸವ ಆಚರಿಸಿದರು.
‘ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮನೆಯಲ್ಲಿ ಧ್ವಜಾರೋಹಣ ಮಾಡಲಾಯಿತು. ನಿಮಗೆಲ್ಲರಿಗೂ ಸ್ವಾತಂತ್ರ್ಯೋತ್ಸವದ ಶುಭಾಶಯಗಳು’ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ. ಜತೆಗೆ ಫೋಟೊಗಳನ್ನೂ ಪೋಸ್ಟ್ ಮಾಡಿದ್ದಾರೆ.
‘स्वतंत्रता दिवस’ के अवसर पर अपने आवास पर ध्वजारोहण किया।
आप सभी को स्वतंत्रता दिवस की हार्दिक शुभकामनाएँ। pic.twitter.com/kfmtRhRIuC
— Amit Shah (@AmitShah) August 15, 2020
ಕೋವಿಡ್-19 ಸೋಂಕು ತಗುಲಿ ಗುರುಗ್ರಾಮದಲ್ಲಿರುವ ಮೆದಾಂತ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಶುಕ್ರವಾರ ಗುಣಮುಖರಾಗಿ ಬಿಡುಗಡೆಯಾಗಿದ್ದರು. ವೈದ್ಯರ ಸಲಹೆಯ ಮೇರೆಗೆ ಇನ್ನೂ ಕೆಲವು ದಿನಗಳವರೆಗೆ ಮನೆಯಲ್ಲಿಯೇ ಕ್ವಾರಂಟೈನ್‌ನಲ್ಲಿರುತ್ತೇನೆ ಎಂದೂ ಹೇಳಿದ್ದರು.
ಕೋವಿಡ್-19ನಿಂದ ಗೃಹ ಸಚಿವ ಅಮಿತ್ ಶಾ ಗುಣಮುಖ, ಪರೀಕ್ಷೆಯಲ್ಲಿ ವರದಿ ನೆಗೆಟಿವ್
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.