ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾತಂತ್ರ್ಯೋತ್ಸವ | ಭಯೋತ್ಪಾದನೆ, ವಿಸ್ತರಣಾ ವಾದವನ್ನು ಭಾರತ ಸೋಲಿಸುತ್ತಿದೆ: ಪ್ರಧಾನಿ ಮೋದಿ
LIVE

ದೇಶದಾದ್ಯಂತ 74ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದೆ. ಈ ಸಂದರ್ಭದಲ್ಲಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿರುವ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಹಾಗೂ ಮೋದಿ ಭಾಷಣದ ಮುಖ್ಯಾಂಶಗಳು ಇಲ್ಲಿವೆ.
Last Updated 15 ಆಗಸ್ಟ್ 2020, 4:00 IST
ಅಕ್ಷರ ಗಾತ್ರ
03:3415 Aug 2020

ಭಾರತ್ ಮಾತಾ ಕೀ ಜೈ, ವಂದೇ ಮಾತರಂ, ಜೈಹಿಂದ್ ಘೋಷಣೆ ಮೊಳಗಿಸಿ ಭಾಷಣ ಮುಗಿಸಿದ ಪ್ರಧಾನಿ ಮೋದಿ

03:2915 Aug 2020

ಭಯೋತ್ಪಾದನೆ, ಭೂಪ್ರದೇಶ ವಿಸ್ತರಣಾ ವಾದವನ್ನು ಭಾರತ ಸೋಲಿಸುತ್ತಿದೆ. ಎಲ್‌ಒಸಿಯಿಂದ ಎಲ್‌ಎಸಿ ವರೆಗೆ ನಮ್ಮ ದೇಶದ ಸಾರ್ವಭೌಮತ್ವದ ಮೇಲೆ ಕಣ್ಣಿಟ್ಟವರಿಗೆ ನಮ್ಮ ಯೋಧರು ಅವರದ್ದೇ ರೀತಿಯಲ್ಲಿ ತಿರುಗೇಟು ನೀಡಿದ್ದಾರೆ: ಪ್ರಧಾನಿ ಮೋದಿ

03:2415 Aug 2020

ನಮ್ಮೊಂದಿಗೆ ಗಡಿ ಹಂಚಿಕೊಂಡಿರುವವರು ಮಾತ್ರ ನೆರೆಯವರಲ್ಲ. ಸಹೃದಯಿ ಬಾಂಧವ್ಯ ಹೊಂದಿಕೊಂಡಿರುವವರೂ ನೆರೆಯವರೇ. ಕಳೆದ ಕೆಲವು ಸಮಯಗಳಿಂದ ಭಾರತವು ಎಲ್ಲ ದೇಶಗಳೊಂದಿಗೆ ಬಾಂಧವ್ಯ ಹೆಚ್ಚಿಸಿಕೊಂಡಿದೆ: ಮೋದಿ

03:2115 Aug 2020

ಜಮ್ಮು-ಕಾಶ್ಮೀರದಲ್ಲಿ ಅಭಿವೃದ್ಧಿಯ ಹೊಸ ಯುಗ ಶುರುವಾಗಿದೆ: ಮೋದಿ

03:1515 Aug 2020

ಕೊರೊನಾಗೆ ಲಸಿಕೆ ಅಭಿವೃದ್ಧಿಪಡಿಸಲು ವಿಜ್ಞಾನಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ದೇಶದಲ್ಲಿ ಮೂರು ಲಸಿಕೆಗಳು ಪ್ರಾಯೋಗಿಕ ಹಂತದಲ್ಲಿವೆ. ವಿಜ್ಞಾನಿಗಳು ಸಮ್ಮತಿ ಸೂಚಿಸಿದ ಬೆನ್ನಲ್ಲೇ ಅಪಾರ ಪ್ರಮಾಣದ ಉತ್ಪಾದನೆ ಆರಂಭವಾಗಲಿದೆ: ಪ್ರಧಾನಿ ಮೋದಿ

03:0615 Aug 2020

ಸ್ತ್ರೀಯರ ವಿವಾಹದ ಕನಿಷ್ಠ ವಯೋಮಿತಿಯ ಪುನರ್ ಪರಿಶೀಲನೆಗೆ ಸಮಿತಿ ರಚಿಸಿದ್ದೇವೆ. ಸಮಿತಿ ವರದಿ ಸಲ್ಲಿಸಿದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದೇವೆ: ಪ್ರಧಾನಿ ಮೋದಿ

03:0615 Aug 2020

ಮಹಿಳೆಯರು ಅವಕಾಶ ಸಿಕ್ಕಾಗಲೆಲ್ಲ ಭಾರತವನ್ನು ಗಟ್ಟಿಗೊಳಿಸಿದ್ದಾರೆ. ಹೆಮ್ಮೆಗೊಳ್ಳುವಂತೆ ಮಾಡಿದ್ದಾರೆ: ಮೋದಿ

03:0115 Aug 2020

‘ಆತ್ಮ ನಿರ್ಭರ ಭಾರತ’ ಸಾಧಿಸಲು ಶಿಕ್ಷಣ ಬಹು ಮುಖ್ಯವಾದದ್ದು. ಅದಕ್ಕಾಗಿ ಹೊಸ ಶಿಕ್ಷಣ ನೀತಿ ರೂಪಿಸಿದ್ದೇವೆ: ಪ್ರಧಾನಿ ಮೋದಿ

03:0115 Aug 2020

2014ಕ್ಕೂ ಮೊದಲು ಕೇವಲ 5 ಡಜನ್ ಹಳ್ಳಿಗಳಿಗೆ ಆಪ್ಟಿಕಲ್ ಫೈಬರ್ ಸಂಪರ್ಕವಿತ್ತು. ಕಳೆದ 5 ವರ್ಷಗಳಲ್ಲಿ 1.5 ಲಕ್ಷ ಗ್ರಾಮ ಪಂಚಾಯಿತಿಗಳಿಗೆ ಆಪ್ಟಿಕಲ್ ಫೈಬರ್ ಸಂಪರ್ಕ ಒದಗಿಸಲಾಗಿದೆ. ಮುಂದಿನ ಸಾವಿರ ದಿನಗಳಲ್ಲಿ ಎಲ್ಲ ಹಳ್ಳಿಗಳಿಗೆ ದೊರೆಯಲಿದೆ: ಮೋದಿ

02:5015 Aug 2020

‘ಆತ್ಮ ನಿರ್ಭರ ಭಾರತ’ ಸಾಧಿಸಲು ಕೃಷಿ ಕ್ಷೇತ್ರ, ಕೃಷಿಕರು ‘ಆತ್ಮ ನಿರ್ಭರ’ರಾಗಬೇಕಿದೆ. ಕೃಷಿಕರಿಗೆ ಹೆಚ್ಚು ಮೂಲಸೌಕರ್ಯ ಕಲ್ಪಿಸಲು ₹1 ಲಕ್ಷ ಕೋಟಿ ‘ಕೃಷಿ ಮೂಲಸೌಕರ್ಯ ನಿಧಿ’ ಸ್ಥಾಪಿಸಲಾಗಿದೆ: ಮೋದಿ