ಶನಿವಾರ, ಮಾರ್ಚ್ 25, 2023
22 °C

India Covid-19 Update: ದೇಶದಲ್ಲಿಂದು 10,929 ಹೊಸ ಪ್ರಕರಣ, 392 ಜನ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ, ಭಾರತದಲ್ಲಿ ಶನಿವಾರ 10,929 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,43,44,683ಕ್ಕೆ ತಲುಪಿದೆ.

ದೇಶದಲ್ಲಿಂದು 392 ಜನರು ಸಾವಿಗೀಡಾಗಿದ್ದು, ಈ ಸಂಖ್ಯೆ 4,60,265 ಕ್ಕೆ ಏರಿಕೆಯಾಗಿದೆ. 1,48,922 ರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 1,46,950ಕ್ಕೆ ಇಳಿದಿದೆ ಎಂದು ಶನಿವಾರ ಬೆಳಿಗ್ಗೆ 8 ಗಂಟೆಗೆ ನವೀಕರಿಸಿದ ಡೇಟಾ ತೋರಿಸಿದೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.43ರಷ್ಟಿದೆ. ಇದು ಕಳೆದ ವರ್ಷ ಮಾರ್ಚ್‌ನಿಂದ ಕಡಿಮೆಯಾಗಿದೆ. ರಾಷ್ಟ್ರೀಯ ಚೇತರಿಕೆ ದರವು ಶೇ 98.23ರಷ್ಟಿದ್ದು, ಇದು ಕಳೆದ ವರ್ಷ ಮಾರ್ಚ್‌ನಿಂದ ಅತ್ಯಧಿಕವಾಗಿದೆ ಎಂದು ಸಚಿವಾಲಯ ತಿಳಿಸಿದೆ.

ದೈನಂದಿನ ಪಾಸಿಟಿವಿಟಿ ದರವು ಶೇ 1.35 ರಷ್ಟಿದೆ. ವಾರದ ಪಾಸಿಟಿವಿಟಿ ದರವು ಶೇ 1.27ರಷ್ಟಿದೆ.

ದೇಶದಲ್ಲಿ ಈವರೆಗೆ 61,39,65,751 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ನೆನ್ನೆ ನವೆಂಬರ್ 5ರಂದು 8,10,783 ಜನರಿಗೆ ಪರೀಕ್ಷೆ ನಡೆಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು