ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: 130 ದಿನಗಳ ಬಳಿಕ ಶೇ 4 ದಾಟಿದ ದೈನಂದಿನ ಪಾಸಿಟಿವಿಟಿ ದರ

Last Updated 20 ಜೂನ್ 2022, 4:56 IST
ಅಕ್ಷರ ಗಾತ್ರ

ನವದೆಹಲಿ:ದೇಶದಲ್ಲಿ ಸೋಮವಾರ ಬೆಳಿಗ್ಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ 12,781 ಕೋವಿಡ್–19 ಪ್ರಕರಣಗಳು ದೃಢಪಟ್ಟಿವೆ. 18 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಇದರೊಂದಿಗೆ, 130 ದಿನಗಳ ಬಳಿಕ ದೇಶದಲ್ಲಿ ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ 4ಕ್ಕಿಂತ ಹೆಚ್ಚಾಗಿದೆ. ಸದ್ಯ ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ 4.32ರಷ್ಟಿದ್ದರೆ, ವಾರದ ಪಾಸಿಟಿವಿಟಿ ಪ್ರಮಾಣ ಶೇ 2.63ರಷ್ಟಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 76,700ಕ್ಕೆ ಏರಿಕೆಯಾಗಿದೆ. ಇದು ಒಟ್ಟು ಪ್ರಕರಣಗಳ ಶೇ 0.18 ರಷ್ಟಿದೆ. ಮರಣ ಪ್ರಮಾಣ ಶೇ 1.21 ರಷ್ಟಿದೆ.

ಈವರೆಗೆ ದೇಶದಾದ್ಯಂತ 196.18 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT