ಭಾನುವಾರ, ಆಗಸ್ಟ್ 1, 2021
21 °C

Covid-19 India Update: 24 ಗಂಟೆಗಳಲ್ಲಿ 67,208 ಹೊಸ ಪ್ರಕರಣಗಳು ಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ದೇಶದಲ್ಲಿ ಒಂದೇ ದಿನದಲ್ಲಿ 67,208 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 2,97,00,313ಕ್ಕೆ ಏರಿಕೆಯಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ.

ಗುರುವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ 2,330 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಮೃತರ ಸಂಖ್ಯೆ 3,81,903ಕ್ಕೆ ಏರಿದೆ.

‘ಸಕ್ರಿಯ ಪ್ರಕರಣಗಳ ಸಂಖ್ಯೆ 8,26,740ಕೆ ಇಳಿಕೆಯಾಗಿದೆ. ಇದು 71 ದಿನಗಳ ಬಳಿಕ ವರದಿಯಾದ ಅತಿ ಕಡಿಮೆ ಸಕ್ರಿಯ ಪ್ರಕರಣಗಳಾಗಿವೆ. ಇದು ಒಟ್ಟು ಕೋವಿಡ್‌ ಪ್ರಕರಣಗಳ ಪೈಕಿ ಶೇಕಡ 2.78ರಷ್ಟು ಪಾಲನ್ನು ಹೊಂದಿದೆ. ಕೋವಿಡ್‌ನಿಂದ ಚೇತರಿಕೆಯಾದವರ ಪ್ರಮಾಣ 95.93ರಷ್ಟಿದೆ’ ಎಂದು ಸಚಿವಾಲಯವು ತಿಳಿಸಿದೆ.

‘ಬುಧವಾರ 19,31,249 ಪರೀಕ್ಷೆಗಳನ್ನು ನಡೆದಿದ್ದು, ಇದುವರೆಗೆ ಒಟ್ಟು 38,52,38,220 ಮಂದಿಯನ್ನು ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ದೈನಂದಿನ ಸೋಂಕು ದೃಢ ಪ್ರಮಾಣವು ಶೇಕಡ 3.48ರಷ್ಟಿದೆ. ಸತತ 10ನೇ ದಿನ ಸೋಂಕು ದೃಢ ಪ್ರಮಾಣವು ಶೇಕಡ 5ಕ್ಕಿಂತ ಕಡಿಮೆಯಿದೆ’ ಎಂದು ಸಚಿವಾಲಯವು ಮಾಹಿತಿ ನೀಡಿದೆ.

‘ದೇಶದಲ್ಲಿ ಸಾವಿನ ಪ್ರಮಾಣವು ಶೇಕಡ 1.29ಕ್ಕೆ ಏರಿಕೆಯಾಗಿದೆ. ಆದರೆ, ಈವರೆಗೆ 2,84,91,670 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಒಟ್ಟು 26,55,19,251 ಮಂದಿಗೆ ಕೋವಿಡ್‌ ಲಸಿಕೆ ನೀಡಲಾಗಿದೆ’ ಎಂದು ಸಚಿವಾಲಯ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು