ಭಾನುವಾರ, ಅಕ್ಟೋಬರ್ 17, 2021
21 °C

ದೇಶಿ ಕಲ್ಲಿದ್ದಲಿನ ಜೊತೆ ಆಮದು ಕಲ್ಲಿದ್ದಲು ಮಿಶ್ರಣಕ್ಕೆ ಅವಕಾಶ: ಕೇಂದ್ರ ಸರ್ಕಾರ

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ರಾಯಿಟರ್ಸ್‌): ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ದೇಶೀಯ ಕಲ್ಲಿದ್ದಲಿನ ಜೊತೆಗೆ ಆಮದು ಮಾಡಿಕೊಂಡ ಕಲ್ಲಿದ್ದಲನ್ನು ಶೇ 10ರಷ್ಟು ಮಿಶ್ರಣ ಮಾಡಲು ಹಾಗೂ ಕಲ್ಲಿದ್ದಲು ಆಮದು ಪ್ರಕ್ರಿಯೆಯನ್ನು ಚುರುಕುಗೊಳಿಸಲು ವಿದ್ಯುತ್ ಉತ್ಪಾದಕರಿಗೆ ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದೆ.

ಜಾಗತಿಕವಾಗಿ ಕಲ್ಲಿದ್ದಲು ದರ ತೀವ್ರಗತಿಯಲ್ಲಿ ಏರಿಕೆಯಾಗಿದೆ. ಇನ್ನೊಂದೆಡೆ ಏಷಿಯಾದ ಮೂರನೇ ಅತಿದೊಡ್ಡ ಆರ್ಥಿಕತೆಯಾದ ಭಾರತದಲ್ಲಿ ಹಲವು ವಿದ್ಯುತ್ ಸ್ಥಾವರಗಳು ಕಲ್ಲಿದ್ದಲು ಕೊರತೆ ಎದುರಿಸುತ್ತಿವೆ. ಸದ್ಯ, ವಿದ್ಯುತ್ ಸ್ಥಾವರಗಳು ಕಡಿಮೆ ಪ್ರಮಾಣದಲ್ಲಿ ಕಲ್ಲಿದ್ದಲು ಆಮದು ಮಾಡಿಕೊಳ್ಳುತ್ತಿದ್ದು, ಸ್ಥಳೀಯ ಕಲ್ಲಿದ್ದಲು ಅವಲಂಬಿಸಿವೆ.

ಸರ್ಕಾರದ್ದೇ ಸಂಸ್ಥೆಯಾಗಿರುವ ಕೋಲ್‌ ಇಂಡಿಯಾ ಲಿಮಿಟೆಡ್‌ಗೆ ಬೇಡಿಕೆಗೆ ಅನುಗುಣವಾಗಿ ಕಲ್ಲಿದ್ದಲು ಪೂರೈಸಲು ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಲ್ಲಿದ್ದಲು ಆಮದಿಗೆ ಸಂಬಂಧಿಸಿದ ನೀತಿಯಲ್ಲಿ ಅಲ್ಪ ಬದಲಾವಣೆ ಮಾಡಲಾಗಿದೆ.

ಕೋವಿಡ್ ಪಿಡುಗಿನ ಬಳಿಕ ದೇಶದಲ್ಲಿ ಆರ್ಥಿಕತೆ ಚೇತರಿಕೆ ಕಾಣುತ್ತಿರುವಂತೆಯೇ, ವಿದ್ಯುತ್‌ಗೂ ಬೇಡಿಕೆ ಹೆಚ್ಚಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು