ಭಾನುವಾರ, ಜುಲೈ 3, 2022
24 °C

ಪರಸ್ಪರ ವಿರೋಧಿ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ: ಭಾರತ–ಬಾಂಗ್ಲಾದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ತಮ್ಮ ಪ್ರದೇಶಗಳಲ್ಲಿ ಪರಸ್ಪರ ದೇಶಗಳ ಹಿತಾಸಕ್ತಿಗೆ ವಿರುದ್ಧವಾದ ಚಟುವಟಿಕೆಗಳನ್ನು ಕೈಗೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಭಾರತ ಮತ್ತು ಬಾಂಗ್ಲಾದೇಶ ಪ್ರಕಟಿಸಿವೆ.

ಆನ್‌ಲೈನ್‌ ಮೂಲಕ ಶನಿವಾರ ನಡೆದ 19ನೇ ಗೃಹ ಕಾರ್ಯದರ್ಶಿಗಳ ಮಟ್ಟದ ಮಾತುಕತೆ ಸಂದರ್ಭದಲ್ಲಿ ಈ ವಿಷಯದ ಬಗ್ಗೆ ನಿರ್ಧಾರಕೈಗೊಳ್ಳಲಾಯಿತು.

ಭಾರತದ ನಕಲಿ ನೋಟುಗಳನ್ನು ಅಕ್ರಮವಾಗಿ ಸಾಗಿಸುವ ಚಟುವಟಿಕೆಗಳನ್ನು ತಡೆಗಟ್ಟಲು ಉಭಯ ದೇಶಗಳ ಭದ್ರತಾ ಪಡೆಗಳು ಪರಸ್ಪರ ಸಹಕಾರ ನೀಡುವುದು ಅಗತ್ಯವಿದೆ. ಈ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗೃಹ ಕಾರ್ಯದರ್ಶಿಗಳು ಚರ್ಚೆ ನಡೆಸಿದರು.

ಭದ್ರತೆ ಮತ್ತು ಗಡಿಗೆ ಸಂಬಂಧಿಸಿದ ವಿಷಯಗಳಲ್ಲಿ ಸಹಕಾರವನ್ನು ಮತ್ತಷ್ಟು ವಿಸ್ತರಿಸಿ ಬಲಪಡಿಸಲು ಉಭಯ ದೇಶಗಳು ಈ ಸಂದರ್ಭದಲ್ಲಿ ಒಪ್ಪಿಗೆ ನೀಡಲಾಯಿತು. ಜತೆಗೆ, ಭಾರತ ಮತ್ತು ಬಾಂಗ್ಲಾದೇಶ ಗಡಿಯಲ್ಲಿ ಬಾಕಿ ಉಳಿದಿರುವ ಬೇಲಿ ಹಾಕುವ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಬಗ್ಗೆ ಈ ಸಂದರ್ಭದಲ್ಲಿ ಚರ್ಚಿಸಲಾಯಿತು.

ಕಾನೂನುಬಾಹಿರವಾಗಿ ಗಡಿಯಲ್ಲಿ ನುಸುಳುವುದನ್ನು ತಡೆಗಟ್ಟಲು ಸಮಗ್ರವಾದ ಗಡಿ ನಿರ್ವಹಣೆ ಯೋಜನೆ ಕೈಗೊಳ್ಳುವ ಬಗ್ಗೆ ಉಭಯ ದೇಶಗಳ ಕಾರ್ಯದರ್ಶಿಗಳು ಈ ಸಂದರ್ಭದಲ್ಲಿ ಚರ್ಚಿಸಿದರು ಎಂದು ಪ್ರಕಟಣೆ ತಿಳಿಸಿದೆ

ಭಾರತದ ಗೃಹ ಕಾರ್ಯದರ್ಶಿ ಅಜಯ್‌ ಕುಮಾರ್‌ ಭಲ್ಲಾ ಮತ್ತು ಬಾಂಗ್ಲಾದೇಶದ ಗೃಹ ಸಚಿವಾಲಯದ ಹಿರಿಯ ಕಾರ್ಯದರ್ಶಿ ಚರ್ಚೆಯಲ್ಲಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು