ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿ ಬಿಕ್ಕಟ್ಟು: ಜ.12ಕ್ಕೆ ಭಾರತ –ಚೀನಾ ನಡುವೆ 14ನೇ ಸುತ್ತಿನ ಮಾತುಕತೆ

Last Updated 8 ಜನವರಿ 2022, 3:19 IST
ಅಕ್ಷರ ಗಾತ್ರ

ನವದೆಹಲಿ: ಪೂರ್ವ ಲಡಾಖ್‌ನಲ್ಲಿನ ಗಡಿ ಬಿಕ್ಕಟ್ಟು ಶಮನಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಚೀನಾ ನಡುವೆ ಜನವರಿ 12ರಂದು ಮಿಲಿಟರಿ ಅಧಿಕಾರಿಗಳ ನಡುವಿನ 14ನೇ ಸುತ್ತಿನ ಉನ್ನತ ಮಟ್ಟದ ಮಾತುಕತೆ ನಡೆಯಲಿದೆ.

ಗಾಲ್ವಾನ್‌ ಕಣಿವೆಯಲ್ಲಿ ಉಂಟಾಗಿದ್ದ ಸಂಘರ್ಷದ ನಂತರ ಎರಡೂ ದೇಶಗಳ ನಡುವೆ ಇದುವರೆಗೆ 13 ಸುತ್ತಿನ ಮಿಲಿಟರಿ ಮಾತುಕತೆಗಳು ನಡೆದಿವೆ. ಆದರೆ, ಈವರೆಗೆ ಇದು ಯಶಸ್ವಿಯಾಗಿಲ್ಲ.

ಕಳೆದ ಬಾರಿ ಪೂರ್ವ ಲಡಾಖ್‌ನ ನೈಜ ನಿಯಂತ್ರಣ ರೇಖೆಯ (ಎಲ್‌ಎಸಿ) ಚೀನಾದ ಬದಿಯ ಚುಶುಲ್-ಮೊಲ್ಡೊ ಗಡಿಯಲ್ಲಿ 13ನೇ ಸುತ್ತಿನ ಮಾತುಕತೆ ನಡೆದಿತ್ತು. ಸುಮಾರು ಎಂಟೂವರೆ ಗಂಟೆಗಳ ಕಾಲ ನಡೆದ ಸಭೆ ಅಂತಿಮವಾಗಿ ವಿಫಲವಾಗಿತ್ತು.

‘ಸಂಘರ್ಷ ಪೀಡಿತ ಇತರ ಪ್ರದೇಶಗಳ ಸಮಸ್ಯೆ ಪರಿಹರಿಸಲು ಭಾರತದ ಕಡೆಯಿಂದ ರಚನಾತ್ಮಕ ಸಲಹೆಗಳನ್ನು ನೀಡಲಾಯಿತು. ಆದರೆ ಚೀನಾ ಇದಕ್ಕೆ ಒಪ್ಪಿಲ್ಲ. ಜೊತೆಗೆ ಆಶಾದಾಯಕ ಪ್ರಸ್ತಾಪಗಳನ್ನು ಅದು ಮಾಡಿಲ್ಲ’ ಎಂದು ಭಾರತೀಯ ಸೇನೆ ಹೇಳಿತ್ತು.

‘ನೈಜ ನಿಯಂತ್ರಣ ರೇಖೆಯ ಬಳಿ ಯಥಾಸ್ಥಿತಿ ಬದಲಿಸಲು ಚೀನಾದ ಕಡೆಯಿಂದ ಏಕಪಕ್ಷೀಯ ಪ್ರಯತ್ನಗಳು ನಡೆದಿವೆ. ಇದು ದ್ವಿಪಕ್ಷೀಯ ಒಪ್ಪಂದಗಳ ಉಲ್ಲಂಘನೆಯಿಂದಾಗಿದೆ. ನೈಜ ನಿಯಂತ್ರಣ ರೇಖೆಯ ಉದ್ದಕ್ಕೂ ಶಾಂತಿಯನ್ನು ಪುನಃಸ್ಥಾಪಿಸಲು ಚೀನಾ ಇನ್ನಿತರ ಪ್ರದೇಶಗಳಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ’ ಎಂದು ಸೇನೆಯು ಚೀನಾಕ್ಕೆ ಮನವರಿಕೆ ಮಾಡಿಕೊಟ್ಟಿತ್ತು.

‘ದ್ವಿಪಕ್ಷೀಯ ಸಂಬಂಧಗಳ ಒಟ್ಟಾರೆ ದೃಷ್ಟಿಕೋನವನ್ನು ಚೀನಾದ ಕಡೆಯವರು ಪರಿಗಣಿಸುತ್ತಾರೆ ಎಂಬುದು ನಮ್ಮ ನಿರೀಕ್ಷೆಯಾಗಿದೆ. ಅಲ್ಲದೇ, ದ್ವಿಪಕ್ಷೀಯ ಒಪ್ಪಂದಗಳು ಹಾಗೂ ಶಿಷ್ಟಾಚಾರವನ್ನು ಸಂಪೂರ್ಣವಾಗಿ ಅನುಸರಿಸಿ, ಉಳಿದ ಸಮಸ್ಯೆಗಳ ಪರಿಹಾರದತ್ತ ಕೆಲಸ ಮಾಡುತ್ತಾರೆ ಎಂದು ನಾವು ಎದುರು ನೋಡುತ್ತಿದ್ದೇವೆ’ ಎಂದು ಭಾರತ ಸೇನೆ ಭರವಸೆ ವ್ಯಕ್ತಪಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT