ಬುಧವಾರ, ಮೇ 12, 2021
18 °C

ಕಾಶ್ಮೀರ ವಿಚಾರ: ಭಾರತ-ಪಾಕ್ ಅಧಿಕಾರಿಗಳ ರಹಸ್ಯ ಮಾತುಕತೆ

ರಾಯಿಟರ್ಸ್ Updated:

ಅಕ್ಷರ ಗಾತ್ರ : | |

Credit: iStock Images

ನವದೆಹಲಿ: ಗಡಿಯಲ್ಲಿನ ಸಮಸ್ಯೆ ಪರಿಹರಿಸಲು ಮತ್ತು ಕಾಶ್ಮೀರ ವಿಚಾರವನ್ನು ನಿಭಾಯಿಸಲು ಕಳೆದ ಜನವರಿಯಲ್ಲಿ ದುಬೈನಲ್ಲಿ ಭಾರತ ಮತ್ತು ಪಾಕಿಸ್ತಾನದ ಉನ್ನತ ಅಧಿಕಾರಿಗಳು ಸಭೆ ನಡೆಸಿದ್ದರು ಎಂದು ತಿಳಿದುಬಂದಿದೆ.

ನವದೆಹಲಿಯಲ್ಲಿ ರಾಯಿಟರ್ಸ್ ಸುದ್ದಿ ಸಂಸ್ಥೆಗೆ ಈ ಬಗ್ಗೆ ಮಾಹಿತಿ ನೀಡಿರುವ ವ್ಯಕ್ತಿಗಳು, ಮಿಲಿಟರಿ ಒಪ್ಪಂದ ಮತ್ತು ಗಡಿ ಸಮಸ್ಯೆ ನಿರ್ವಹಣೆ ಕುರಿತು ಉಭಯ ರಾಷ್ಟ್ರಗಳ ಮಧ್ಯೆ ರಹಸ್ಯವಾಗಿ ಚರ್ಚೆ ನಡೆದಿತ್ತು ಎಂದು ಹೇಳಿದ್ದಾರೆ.

ಅಣ್ವಸ್ತ್ರ ಬಳಕೆ ಮತ್ತು ಶೇಖರಣೆ ಸಂಬಂಧವೂ ಭಾರತ-ಪಾಕ್ ಮಧ್ಯೆ ಶೀತಲ ಸಮರ ಏರ್ಪಟ್ಟಿದೆ. ಅಲ್ಲದೆ, ಕೇಂದ್ರ ಸರ್ಕಾರ, ಜಮ್ಮು-ಕಾಶ‌್ಮೀರಕ್ಕೆ ನೀಡಲಾಗಿದ್ದ ವಿಶೇಷಾಧಿಕಾರವನ್ನು ಕೂಡ ರದ್ದುಪಡಿಸಿ, ಕೇಂದ್ರಾಡಳಿತ ಪ್ರದೇಶವನ್ನಾಗಿಸಿ ಹೆಚ್ಚಿನ ನಿಯಂತ್ರಣ ಸಾಧಿಸಿದೆ.

ಇದರಿಂದಾಗಿ ಪಾಕಿಸ್ತಾನ ಅಸಮಾಧಾನಗೊಂಡಿದ್ದು, ಗಡಿಯಲ್ಲಿ ಮತ್ತೆ ಸಮಸ್ಯೆ ಸೃಷ್ಟಿಸುತ್ತಿದೆ.

ಹೀಗಾಗಿ ಗಡಿಯಲ್ಲಿ ಶಾಂತಿ ನೆಲೆಸುವಂತೆ ಮಾಡುವುದು ಮತ್ತು ಉಭಯ ರಾಷ್ಟ್ರಗಳ ಮಧ್ಯೆ ಸಂಧಾನ ನಡೆಸಿ, ದ್ವಿಪಕ್ಷೀಯ ಸಂಬಂಧ ವೃದ್ಧಿಸುವ ಉದ್ದೇಶದಿಂದ ದುಬೈನಲ್ಲಿ ರಹಸ್ಯವಾಗಿ ಉನ್ನತ ಮಟ್ಟದ ಗುಪ್ತಚರ ಅಧಿಕಾರಿಗಳು ಭೇಟಿಯಾಗಿ ಚರ್ಚಿಸಿದ್ದರು ಎಂದು ಈ ಬಗ್ಗೆ ಮಾಹಿತಿ ಇರುವ ವ್ಯಕ್ತಿಗಳು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು