ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫ್ಗಾನಿಸ್ತಾನಕ್ಕೆ ಹೊಸ ಮಾದರಿಯ ವೀಸಾ ಘೋಷಿಸಿದ ಭಾರತ

Last Updated 17 ಆಗಸ್ಟ್ 2021, 6:00 IST
ಅಕ್ಷರ ಗಾತ್ರ

ದೆಹಲಿ: ಭಾರತಕ್ಕೆ ಬರಲು ಬಯಸುವ ಅಫ್ಗನ್ನರ ವೀಸಾ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಕೇಂದ್ರ ಗೃಹ ಸಚಿವಾಲಯವು ಮಂಗಳವಾರ ಹೊಸ ಮಾದರಿಯ ವೀಸಾವನ್ನು ಘೋಷಿಸಿದೆ.

ಅಫ್ಗಾನಿಸ್ತಾನದ ಅಧಿಕಾರವನ್ನು ತಾಲಿಬಾನ್ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

‘ಅಫ್ಗಾನಿಸ್ತಾನದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವಿದೇಶಾಂಗ ಇಲಾಖೆಯು ವೀಸಾ ನಿಬಂಧನೆಗಳನ್ನು ಪರಿಶೀಲಿಸುತ್ತಿದೆ. ಭಾರತಕ್ಕೆ ಪ್ರವೇಶಿಸಲು ಅಗತ್ಯವಾದ ವೀಸಾಕ್ಕೆ ಸಂಬಂಧಿಸಿದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು 'ಇ-ಎಮರ್ಜೆನ್ಸಿ ಎಕ್ಸ್-ಮಿಸ್ಕ್ ವೀಸಾ' ಎಂಬ ಹೊಸ ಮಾದರಿಯ ಎಲೆಕ್ಟ್ರಾನಿಕ್ ವೀಸಾವನ್ನು ಪರಿಚಯಿಸಲಾಗುತ್ತಿದೆ,‘ ಎಂದು ಗೃಹ ಸಚಿವಾಲಯ ಮಂಗಳವಾರ ತಿಳಿಸಿದೆ.

ಇವುಗಳನ್ನೂ ಓದಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT