ಕೋವಿಡ್ ಲಸಿಕೆ: ‘ಕೋವಿಶೀಲ್ಡ್’ ತುರ್ತು ಬಳಕೆಗೆ ಭಾರತ ಅನುಮೋದನೆ

ನವದೆಹಲಿ: ಆಕ್ಸ್ಫರ್ಡ್ ಯುನಿವರ್ಸಿಟಿ ಹಾಗೂ ಅಸ್ಟ್ರಾಜೆನೆಕಾ ಸಂಸ್ಥೆಗಳು ಕೋವಿಡ್–19ಗೆ ಅಭಿವೃದ್ಧಿಪಡಿಸಿದ ‘ಕೋವಿಶೀಲ್ಡ್’ ಲಸಿಕೆಯನ್ನು ಭಾರತದಲ್ಲಿ ತುರ್ತು ಸಂದರ್ಭದ ಬಳಕೆಗೆ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಶನಿವಾರ ತಿಳಿಸಿದ್ದಾರೆ.
ತುರ್ತು ಸಂದರ್ಭದಲ್ಲಿ ಲಸಿಕೆ ಬಳಕೆಗೆ ತಜ್ಞರ ಸಮಿತಿಯು ಒಪ್ಪಿಗೆ ನೀಡಿದ್ದು ಇದಕ್ಕೆ ಭಾರತ ಸರ್ಕಾರ ಅನುಮೋದನೆ ಸೂಚಿಸಿದೆ ಎಂದು ಸಚಿವರು ತಿಳಿಸಿದರು.
ಭಾರತದಲ್ಲಿ ಪುಣೆಯ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಸಂಸ್ಥೆ ಕೋವಿಶೀಲ್ಡ್ ಲಸಿಕೆಯನ್ನು ತಯಾರಿಸುತ್ತಿದೆ. ಭಾರತದಲ್ಲಿ ಮೊದಲಿಗೆ ಅನುಮೋದನೆ ಪಡೆದ ಲಸಿಕೆ ಇದಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ನಾಲ್ಕು ಲಸಿಕೆಗಳನ್ನು ಅಭಿವೃದ್ಧಿಪಡಿಸಿದ ಜಗತ್ತಿನ ಏಕೈಕ ದೇಶ ಭಾರತವಾಗಿದೆ. ಇನ್ನು ಮೂರು ಲಸಿಕೆಗಳು ತುರ್ತು ಬಳಕೆಯ ಅನುಮೋದನೆಗಾಗಿ ಕಾಯತ್ತಿವೆ. ತಜ್ಞರ ಸಮಿತಿಯು ದತ್ತಾಂಶಗಳನ್ನು ಪರಿಶೀಲನೆ ಮಾಡುತ್ತಿದ್ದು ಒಪ್ಪಿಗೆ ಸೂಚಿಸಿದ ಕೂಡಲೇ ಅನುಮೋದನೆ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.