ಮಂಗಳವಾರ, ನವೆಂಬರ್ 30, 2021
21 °C

ಪಾಕ್ ಸೇನೆಯಿಂದ ಅಪ್ರಚೋದಿತ ದಾಳಿ; ಭಾರತದ ಜೂನಿಯರ್ ಕಮಿಷನ್ಡ್ ಆಫೀಸರ್‌ ಹುತಾತ್ಮ

ಎಎನ್ಐ Updated:

ಅಕ್ಷರ ಗಾತ್ರ : | |

ಸಾಂದರ್ಭಿಕ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ವಾಸ್ತವ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಪಾಕಿಸ್ತಾನದ ಸೈನಿಕರು ನಡೆಸಿದ ಗುಂಡಿನ ದಾಳಿಯಲ್ಲಿ ಭಾರತದ ಜೂನಿಯರ್ ಕಮಿಷನ್ಡ್ ಆಫೀಸರ್‌ (ಜೆಸಿಒ) ಹುತಾತ್ಮರಾಗಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

ಪಾಕಿಸ್ತಾನದ ಪಡೆಗಳು ಕದನ ವಿರಾಮವನ್ನು ಉಲ್ಲಂಘಿಸಿ ಕೇರಿ ಸೆಕ್ಟರ್‌ನ ಫಾರ್ವರ್ಡ್ ಪೋಸ್ಟ್‌ಗಳಿಗೆ ಗುಂಡು ಹಾರಿಸಿದ್ದು, ಭಾರತೀಯ ಸೇನೆಯಿಂದಲೂ ಪ್ರತ್ಯುತ್ತರವಾಗಿ ಗುಂಡಿನ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಪಾಕಿಸ್ತಾನದ ಗುಂಡಿನ ದಾಳಿಯಲ್ಲಿ ಜೆಸಿಒ ಗಂಭೀರವಾಗಿ ಗಾಯಗೊಂಡಿದ್ದು, ಬಳಿಕ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಾಕಿಸ್ತಾನದ ಸೇನೆಯಲ್ಲಿಯೂ ಸಾವು ನೋವು ಸಂಭವಿಸಿದ್ದು, ನಿಖರವಾದ ವಿವರಗಳನ್ನು ನಿರೀಕ್ಷಿಸಲಾಗಿದೆ.

ಕಳೆದ ನಾಲ್ಕು ದಿನಗಳಲ್ಲಿ ಎರಡನೇ ಭಾರಿ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆದಿದೆ. ಆಗಸ್ಟ್ 30 ರಂದು ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನಲ್ಲಿ ಜೆಸಿಒ ಒಬ್ಬರನ್ನು ಹತ್ಯೆಮಾಡಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು